ರಾಜ ಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾ ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಸೇರಿದಂತೆ ಎಲ್ಲಾ ಭಾಷೆಗಳಲ್ಲಿ ಮೇ 20 ರಿಂದ ಜೀ5 ನಲ್ಲಿ ಪ್ರಸಾರವಾಗಲಿದೆ.
ಥಿಯೇಟರ್ ನಲ್ಲಿ ಬಿಡುಗಡೆಯಾಗಿ 1000 ಕೋಟಿ ರೂ. ಗಳಿಕೆ ಮಾಡಿದ್ದ ಆರ್ ಆರ್ ಆರ್ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಮೇ 20 ರಿಂದ ಒಟಿಟಿಯಲ್ಲಿ ಸಿನಿಮಾ ವೀಕ್ಷಿಸಲು ಅಭಿಮಾನಿಗಳು ಆಸಕ್ತರಾಗಿದ್ದಾರೆ.
ಈ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್, ರಾಮ್ ಚರಣ್, ಅಜಯ್ ದೇವಗನ್, ಆಲಿಯಾ ಭಟ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
‘ಆರ್‌ಆರ್‌ಆರ್’ ಚಿತ್ರ 1920ರ ದಶಕದ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮ ರಾಜು, ಕೊಮರಂ ಭೀಮ್ ಅವರ ಜೀವನವನ್ನು ಆಧರಿಸಿದ ಕಾಲ್ಪನಿಕ ಕಥೆ ಆಗಿದೆ. ಈ ಚಿತ್ರದಲ್ಲಿ ಸೀತಾರಾಮ ರಾಜು ಪಾತ್ರದಲ್ಲಿ ರಾಮ್ ಚರಣ್, ಕೊಮರಂ ಭೀಮ್ ಪಾತ್ರದಲ್ಲಿ ಜೂನಿಯರ್ ಎನ್‌ಟಿಆರ್ ಕಾಣಿಸಿಕೊಂಡಿದ್ದಾರೆ.
ಚಿತ್ರಕ್ಕೆ ಎಂ.ಎಂ.ಕೀರವಾಣಿ ಸಂಗೀತ ಸಂಯೋಜಿಸಿದ್ದಾರೆ. ಡಿವಿವಿ ಎಂಟರ್‌ಟೈನ್ಮೆಂಟ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಆರ್ ಆರ್ ಆರ್ ಸಿನಿಮಾಗೆ ವಿ.ವಿಜಯೇಂದ್ರ ಪ್ರಸಾದ್ ಕಥೆ, ಮತ್ತು ಶ್ರೀಕರ್ ಪ್ರಸಾದ್ ಸಂಕಲನವಿದೆ.
Be the first to comment