‘ವಿಕ್ರಾಂತ್ ರೋಣ’ ಕ್ಕೆ ಸಲ್ಮಾನ್ ಸಾಥ್

‘ವಿಕ್ರಾಂತ್ ರೋಣ’ ಚಿತ್ರಕ್ಕೆ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಸಾಥ್ ನೀಡಿದ್ದಾರೆ. ಈ ಚಿತ್ರದ ಹಿಂದಿ ವಿತರಣೆಯ ಜವಾಬ್ದಾರಿಯನ್ನು ಸಲ್ಮಾನ್ ಹೊತ್ತಿದ್ದಾರೆ.

ಈ ಬಗ್ಗೆ ಚಿತ್ರತಂಡ ರಿವೀಲ್ ಮಾಡಿದ್ದು, ಸಲ್ಮಾನ್ ಖಾನ್ ಕೂಡ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ 3ಡಿ ಅವತರಣಿಕೆಯನ್ನು ಹಿಂದಿಯಲ್ಲಿ ಪ್ರೆಸೆಂಟ್ ಮಾಡುತ್ತಿರುವುದು ಸಂತೋಷವಾಗುತ್ತಿದೆ ಎಂದು ಸಲ್ಮಾನ್ ಹೇಳಿದ್ದಾರೆ.

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರ ಜುಲೈ 28ಕ್ಕೆ ರಿಲೀಸ್ ಆಗುತ್ತಿದೆ.ಈಗಾಗಲೇ ವಿಕ್ರಾಂತ್ ರೋಣ ಚಿತ್ರದ ಓವರ್‌ಸೀಸ್ ರೈಟ್ಸ್ ಭಾರಿ ಮೊತ್ತಕ್ಕೆ ಮಾರಾಟವಾಗಿದೆ. ಅನೂಪ್ ಭಂಡಾರಿ ನಿರ್ದೇಶನದಲ್ಲಿ ಸುದೀಪ್ ಜತೆ ಜಾಕ್ವೆಲಿನ್ ಫೆರ್ನಾಂಡಿಸ್ ನಿರೂಪ್ ಭಂಡಾರಿ, ನೀತಾ ಅಶೋಕ್ ಸೇರಿದಂತೆ ಹಲವರು ನಟಿಸಿದ್ದಾರೆ.

ಈ ಚಿತ್ರವು ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅರೇಬಿಕ್, ಜರ್ಮನ್, ರಷ್ಯನ್, ಮ್ಯಾಂಡರಿನ್, ಇಂಗ್ಲಿಷ್ ಮತ್ತು ಇತರ ಭಾಷೆಗಳಲ್ಲಿಯೂ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಚಿತ್ರದಲ್ಲಿ ನಟಿಸಿರುವುದು ಸಾಕಷ್ಟು ನಿರೀಕ್ಷೆಗೆ ಕಾರಣವಾಗಿದೆ.
ಕನ್ನಡ, ತೆಲುಗು, ಹಿಂದಿ, ಮಲಯಾಳಂ, ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ಈ ಪೋಸ್ಟರ್ ರಿಲೀಸ್ ಆಗಿದೆ. ‘ಗದಂಗ್ ರಕ್ಕಮ್ಮ’ ಎಂಬ ರಗಡ್ ಪಾತ್ರದಲ್ಲಿ ಶ್ರೀಲಂಕಾ ಚೆಲುವೆ ಜಾಕ್ವೆಲಿನ್ ನಟಿಸುತ್ತಿದ್ದು ಈ ಪೋಸ್ಟರ್ ಈಗಾಗಲೇ ಚಿತ್ರ ಪ್ರೇಮಿಗಳ ಗಮನ ಸೆಳೆದಿದೆ.

ಭಾರತೀಯ ಸಿನಿಮಾಗಳಲ್ಲಿ ಹೆಚ್ಚು ನಿರೀಕ್ಷೆ ಮೂಡಿಸಿದ ಚಿತ್ರಗಳ ಬಗ್ಗೆ ಐಎಂಡಿಬಿ ಸಂಸ್ಥೆ ಪ್ರಕಟಿಸಿದ ಪಟ್ಟಿಯಲ್ಲಿ ವಿಕ್ರಾಂತ್ ರೋಣ ಸಿನಿಮಾ ಮೊದಲ ಸ್ಥಾನ ಪಡೆದಿತ್ತು.
_______

Be the first to comment

Leave a Reply

Your email address will not be published. Required fields are marked *

Translate »
error: Content is protected !!