ವಸಿಷ್ಠ ಸಿಂಹ ನಟನೆಯ ‘ಲವ್ಲಿ’ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಗಮನ ಸೆಳೆಯುತ್ತಿದೆ.
ಕೈಯಲ್ಲಿ ಮಚ್ಚು ಹಿಡಿದಿರುವ ವಸಿಷ್ಠ ಸಿಂಹ ರಗಡ್ ಲುಕ್ ಮೂಲಕ ಗಮನ ಸೆಳೆದಿದ್ದಾರೆ. ಈ ಚಿತ್ರಕ್ಕೆ ಸಮೀಕ್ಷಾ ನಾಯಕಿಯಾಗಿ ಆಯ್ಕೆ ಆಗಿದ್ದಾರೆ.
ಪುನೀತ್ ರಾಜ್ಕುಮಾರ್ ನಟನೆಯ ‘ಜೇಮ್ಸ್’ , ’99’, ಹಾಗೂ ‘ಫ್ಯಾನ್’ ಚಿತ್ರಗಳಲ್ಲಿ ನಟಿಸಿದ್ದ ಸಮೀಕ್ಷಾ ಈ ಚಿತ್ರದಲ್ಲಿ ಕಾರ್ಪೊರೇಟ್ ಹುಡುಗಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಚಿತ್ರತಂಡ ಈಗಾಗಲೇ ತಿಳಿಸಿದೆ.
ಕನ್ನಡ, ತೆಲುಗು ಎರಡೂ ಭಾಷೆಗಳಲ್ಲೂ ಛಾಪು ಮೂಡಿಸುತ್ತಿರುವ ವಸಿಷ್ಠ ಸಿಂಹ ಅವರ ಹೊಸ ಚಿತ್ರವನ್ನು ಚೇತನ್ ಕೇಶವ್ ನಿರ್ದೇಶನ ಮಾಡುತ್ತಿದ್ದಾರೆ. ಚೇತನ್ ಕೇಶವ್ ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಈ ಸಿನಿಮಾ ಮಾಡಲು ಹೊರಟಿದ್ದಾರೆ. ರವೀಂದ್ರ ಕುಮಾರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಹರೀಶ್ಕೊಂಬೆ ಕ್ಯಾಮೆರಾ, ಅನೂಪ್ ಸಿಳೀನ್ ಸಂಗೀತ ಸಂಯೋಜನೆ ಇದೆ.
ವಸಿಷ್ಠ ಸಿಂಹ ತಮ್ಮ ಬಹುದಿನಗಳ ಕನಸಾದ ಸಿಂಹಾ ಆಡಿಯೋ ಸಂಸ್ಥೆಯನ್ನು ಈಗಾಗಲೇ ಆರಂಭಿಸಿದ್ದಾರೆ.
ಸಿಂಹಾ ಆಡಿಯೋ ಯೂಟ್ಯೂಬ್ ಚಾನಲ್ನಲ್ಲಿ ಮೊದಲ ಹಾಡಾಗಿ ವಸಿಷ್ಠ ಸಿಂಹ ನಾಯಕನಾಗಿ ನಟಿಸಿರುವ ‘ಕಾಲಚಕ್ರ’ ಚಿತ್ರದ ನೀನೇ ಬೇಕು ಹಾಡು ಬಿಡುಗಡೆಯಾಗಿದೆ.
____




Be the first to comment