ಮೆಚ್ಚುಗೆ ಪಡೆದ ‘ವಿಕ್ರಾಂತ್ ರೋಣ’ ಸಾಂಗ್

ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾ ಮೊದಲ ಹಾಡು ರಿಲೀಸ್ ಆಗಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.

ಗಡಂಗ್ ರಕ್ಕಮ್ಮ ಲಿರಿಕಲ್ ಹಾಡು ರಿಲೀಸ್ ಆಗಿದ್ದು ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಕಿಚ್ಚನ ಜೊತೆಗೆ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡೀಸ್ ರಕ್ಕಮ್ಮನಾಗಿ ಹೆಜ್ಜೆ ಹಾಕಿದ್ದಾರೆ. ಜಾಕ್ವೆಲಿನ್ ಕೆಂಪು ಸ್ಕರ್ಟ್, ಹರಿಸು ರವಿಕೆ ತೊಟ್ಟು ದೇಶಿ ಹುಡುಗಿಯ ಲುಕ್‌ನಲ್ಲಿ ಮಿಂಚಿದ್ದಾರೆ. ಸುದೀಪ್ ಶರ್ಟ್, ಟೋಪಿ ತೊಟ್ಟು ಡಿಟೆಕ್ಟಿವ್ ರೀತಿಯಲ್ಲಿ ಹೆಜ್ಜೆ ಹಾಕಿದ್ದಾರೆ.

ಈ ಹಾಡು ಹಿಂದಿ, ತೆಲುಗು, ತಮಿಳು, ಮಲಯಾಳಂನಲ್ಲಿ ಅನುಕ್ರಮವಾಗಿ ಮೇ 24, 25, 26, 27ರಂದು ಮಧ್ಯಾಹ್ನ 1.05 ಗಂಟೆಗೆ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಈ ಚಿತ್ರದಲ್ಲಿ ಬಾಲಿವುಡ್​ ಬೆಡಗಿ ಜಾಕ್ವೆಲಿನ್​ ಫರ್ನಾಂಡಿಸ್​ ಪಾತ್ರದ ಹೆಸರು ಗಡಂಗ್​ ರಕ್ಕಮ್ಮ. ಈ ಹೆಸರನ್ನೇ ಬಳಸಿಕೊಂಡು’ರಾ ರಾ ರಕ್ಕಮ್ಮ..’ ಎಂಬ ಸ್ಪೆಷಲ್‌ ಸಾಂಗ್ ಮಾಡಲಾಗಿದೆ. ಈ ಹಾಡಿನಲ್ಲಿ ಗ್ಲಾಮರಸ್ ಕಾಸ್ಟ್ಯೂಮ್​ ಧರಿಸಿ, ಕೈಯಲ್ಲಿ ಸಾರಾಯಿ ಬಾಟಲಿ ಹಿಡಿದು ಜಾಕ್ವೆಲಿನ್​ ಫರ್ನಾಂಡಿಸ್​ ಸ್ಟೆಪ್ಸ್‌ ಹಾಕಿದ್ದಾರೆ.

ಈ ಸಿನಿಮಾದಲ್ಲಿ ನಿರೂಪ್​ ಭಂಡಾರಿ, ನೀತಾ ಅಶೋಕ್ ನಟಿಸಿದ್ದು, ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿದೆ. 3ಡಿ ಅವತರಣಿಕೆಯಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಶಾಲಿನಿ ಆರ್ಟ್ಸ್ ಬ್ಯಾನರ್​ ಅಡಿ ಜಾಕ್​ ಮಂಜು ಚಿತ್ರ ನಿರ್ಮಾಣ ಮಾಡಿದ್ದಾರೆ. ಅಲಂಕಾರ್​ ಪಾಂಡಿಯನ್​ ಸಹ-ನಿರ್ಮಾಪಕರಾಗಿದ್ದಾರೆ.

ಈ ಚಿತ್ರವು ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅರೇಬಿಕ್, ಜರ್ಮನ್, ರಷ್ಯನ್, ಮ್ಯಾಂಡರಿನ್, ಇಂಗ್ಲಿಷ್ ಮತ್ತು ಇತರ ಭಾಷೆಗಳಲ್ಲಿಯೂ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಚಿತ್ರದಲ್ಲಿ ನಟಿಸಿರುವುದು ಸಾಕಷ್ಟು ನಿರೀಕ್ಷೆಗೆ ಕಾರಣವಾಗಿದೆ.
ಕನ್ನಡ, ತೆಲುಗು, ಹಿಂದಿ, ಮಲಯಾಳಂ, ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ಈ ಪೋಸ್ಟರ್ ರಿಲೀಸ್ ಆಗಿದೆ. ಪೋಸ್ಟರ್ ಈಗಾಗಲೇ ಚಿತ್ರ ಪ್ರೇಮಿಗಳ ಗಮನ ಸೆಳೆದಿದೆ.

ಭಾರತೀಯ ಸಿನಿಮಾಗಳಲ್ಲಿ ಹೆಚ್ಚು ನಿರೀಕ್ಷೆ ಮೂಡಿಸಿದ ಚಿತ್ರಗಳ ಬಗ್ಗೆ ಐಎಂಡಿಬಿ ಸಂಸ್ಥೆ ಪ್ರಕಟಿಸಿದ ಪಟ್ಟಿಯಲ್ಲಿ ವಿಕ್ರಾಂತ್ ರೋಣ ಸಿನಿಮಾ ಮೊದಲ ಸ್ಥಾನ ಪಡೆದಿತ್ತು. ವಿಕ್ರಾಂತ್ ರೋಣ ಸಿನಿಮಾ ಜುಲೈ 28ರಂದು ತೆರೆಗೆ ಬರುತ್ತಿದೆ. ಸದ್ಯ, ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ.
_______

Be the first to comment

Leave a Reply

Your email address will not be published. Required fields are marked *

Translate »
error: Content is protected !!