ಭರದಿಂದ ಸಾಗುತ್ತಿದೆ ಬಾಂಡ್ ರವಿ ಶೂಟಿಂಗ್

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಪ್ರಮೋದ್ ನಟನೆಯ ಬಹು ನಿರೀಕ್ಷಿತ ಸಿನ್ಮಾ ಬಾಂಡ್ ರವಿ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.

ಈಗಾಗಲೇ 70%ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ, ಬೆಂಗಳೂರಿನ HMTಯಲ್ಲಿ ಸಾಹಸ ದೃಶ್ಯದ ಚಿತ್ರೀಕರಣ ನಡೆಸಿದೆ. ಸಾಹಸ ನಿರ್ದೇಶಕ ಮಾಸ್ಟರ್ ವಿನೋದ್ ಸಾಹಸ ಸಂಯೋಜನೆಯಲ್ಲಿ ಸಾಹಸ ಸನ್ನಿವೇಶದ ಚಿತ್ರೀಕರಣ ನಡೆದಿದೆ. ಪ್ರಮೋದ್, ಸಹಕಲಾವಿದರು ಆಕ್ಷನ್ ಸೀನ್ಸ್ ನಲ್ಲಿ ಭಾಗಿ ಆದರು.

ಕಳೆದ‌ ಹನ್ನೊಂದು ವರ್ಷದಿಂದ ನಿರ್ದೇಶನದ ವಿಭಾಗದಲ್ಲಿ ಕೆಲಸ ಮಾಡಿರುವ ಪ್ರಜ್ವಲ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಕಮರ್ಷಿಯಲ್, ಆಕ್ಷನ್-ಲವ್ ಸ್ಟೋರಿ ಸಿನಿಮಾ ಆಗಿದೆ. ಲೈಫ್ ಲೈನ್ ಫಿಲ್ಮಸ್ ಬ್ಯಾನರ್ ನಡಿ ನರಸಿಂಹಮೂರ್ತಿ ಬಂಡವಾಳ ಹೂಡಿದ್ದಾರೆ. ಈ‌ ಹಿಂದೆ ನರಸಿಂಹಮೂರ್ತಿ ಮಾದ ಮನಸಿ ಸಿನಿಮಾ ನಿರ್ಮಾಣ ಮಾಡಿದ್ದರು. ಪ್ರಮೋದ್ ಗೆ ಜೋಡಿಯಾಗಿ ಮಾಯಕನ್ನಡಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದಾರೆ.

ಮಲ್ಲಿಕಾರ್ಜುನ್ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್, ತೆಲುಗಿನ ಖ್ಯಾತ ನಟ ರವಿ ಪ್ರಕಾಶ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಸಂಕಲನ, ಸುನಿಲ್, ದೇವ್ ಎನ್ ರಾಜ್ ಸಂಭಾಷಣೆ, ಮನೋಮೂರ್ತಿ  ಸಂಗೀತ, ಜಯಂತ್ ಕಾಯ್ಕಿಣಿ, ನಾಗೇಂದ್ರ ಪ್ರಸಾದ್ ಸಾಹಿತ್ಯ ಸಿನಿಮಾಕ್ಕಿದೆ.


Be the first to comment

Leave a Reply

Your email address will not be published. Required fields are marked *

Translate »
error: Content is protected !!