ಖ್ಯಾತ ನಟಿ ಸಾಯಿ ಪಲ್ಲವಿ ಅಭಿನಯದ “ಗಾರ್ಗಿ’ ಚಿತ್ರ ಜುಲೈ ಹದಿನೈದರಂದು ಬಿಡುಗಡೆಯಾಗುತ್ತಿದೆ. ಹೆಸರಾಂತ ಪರಮ್ ವಾ ಪಿಕ್ಚರ್ಸ್ ಕನ್ನಡದಲ್ಲಿ ಈ ಚಿತ್ರವನ್ನು ಪ್ರಸ್ತುತ ಪಡಿಸಲಿದೆ. ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಹಿಂದೆ ಕಾಶ್ಮೀರಿ ಪಂಡಿತರ ಹತ್ಯೆಯನ್ನು ದೇಶದಲ್ಲಿ ಗೋ ರಕ್ಷಕರ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಹೋಲಿಸಿ ಮಾತನಾಡಿದ ಬಹುಭಾಷಾ ನಟಿ ಸಾಯಿಪಲ್ಲವಿ ವಿರುದ್ಧ ಹೈದರಾಬಾದ್ನಲ್ಲಿ ದೂರು ದಾಖಲಾಗಿದೆ. ಈಗ ಇಂತಹ ಹೇಳಿಕೆ ಕೊಟ್ಟ ನಟಿಯ ಚಿತ್ರವನ್ನು ರಕ್ಷಿತ್ ಶೆಟ್ಟಿ ಪ್ರೋತ್ಸಾಹಿದ್ದಕ್ಕೆ ಹಲವರು ಬೆನ್ನುತಟ್ಟಿದರೆ ಇನ್ನೂ ಕೆಲವರು ತಮ್ಮ ಆಕ್ರೋಶವನ್ನು ಕಮೆಂಟ್ಗಳ ಮೂಲಕ ತಿಳಿಸಿದ್ದಾರೆ. ಒಟ್ಟಿನಲ್ಲಿ, `ಕಲೆ ಎಲ್ಲವನ್ನು ಮೀರಿದ್ದು’ ಎಂಬ ಭಾವನೆಯಲ್ಲಿ ಒಳ್ಳೆಯ ಚಿತ್ರವೊಂದನ್ನು ಕನ್ನಡಕ್ಕೂ ತರಲು ಹೊರಟ ರಕ್ಷಿತ್ ನಡೆಗೆ ಸಾಕಷ್ಟು ಅಸಮಾಧಾನ ವ್ಯಕ್ತವಾಗುತ್ತಿದೆ.
ಗೌತಮ್ ರಾಮಚಂದ್ರನ್ ನಿರ್ದೇಶನದ ಈ ಚಿತ್ರ ತಮಿಳಿನಲ್ಲಿ ನಿರ್ಮಾಣವಾಗಿದ್ದು, ಕನ್ನಡ ಹಾಗೂ ತೆಲುಗಿಗೆ ಡಬ್ ಆಗಿದೆ. ರವಿಚಂದ್ರನ್ ರಾಮಚಂದ್ರನ್, ಐಶ್ವರ್ಯ ಲಕ್ಷ್ಮೀ, ಥಾಮಸ್ ಜಾರ್ಜ್ ಹಾಗೂ ಗೌತಮ್ ರಾಮಚಂದ್ರನ್ ನಿರ್ಮಿಸಿರುವ ಈ ಚಿತ್ರಕ್ಕೆ ಗೋಗಿಂದ್ ವಸಂತ ಸಂಗೀತ ನೀಡಿದ್ದಾರೆ. ಸ್ರೈಯಂತಿ ಹಾಗೂ ಪ್ರೇಮ್ ಅಕ್ಕಟ್ಟು ಛಾಯಾಗ್ರಹಣ, ಶಫಿಕ್ ಮೊಹಮದ್ ಆಲಿ ಅವರ ಸಂಕಲನ ಈ ಚಿತ್ರಕ್ಕಿದೆ. ಸಾಯಿಪಲ್ಲವಿ, ಕಾಳಿ ವೆಂಕಟ್, ಸರವಣನ್, ಜಯಪ್ರಕಾಶ್, ಆರ್ ಎಸ್ ಶಿವಾಜಿ, ಲಿವಿಂಗ್ ಸ್ಟನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Be the first to comment