ಗಾಳಿಪಟ2ರ ಹೊಸ ಸಾಂಗ್ ರಿಲೀಸ್

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗಾಳಿಪಟ 2 ಚಿತ್ರದ ಹೊಸ ಸಾಂಗ್ ಪ್ರಾಯಶಃ ಬಿಡುಗಡೆ ಆಗಿದ್ದು ಸದ್ದು ಮಾಡುತ್ತಿದೆ.

ಈ ಹಾಡನ್ನು ಸೋನು ನಿಗಮ್ ಹಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದು, ಸಾಹಿತ್ಯವನ್ನು ನಿರ್ದೇಶಕ ಯೋಗರಾಜ್ ಭಟ್ ಬರೆದಿದ್ದಾರೆ.

ಈಗಾಗಲೇ ಗಾಳಿಪಟ-2 ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಸಾಕಷ್ಟು ನಿರೀಕ್ಷೆ ಮೂಡಿಸಿದೆ. ದಿಗಂತ್, ಗಣೇಶ್, ಪವನ್, ಅನಂತನಾಗ್ ಮುಖ್ಯ ಭೂಮಿಕೆಯಲ್ಲಿರುವ ಗಾಳಿಪಟ2 ಸಿನಿಮಾದಲ್ಲಿ ಸ್ನೇಹ, ಸಂಕಟದ ಕಥಾಹಂದರ ಮೂಡಿ ಬಂದಿದೆ.

ಗಾಳಿಪಟ-2 ಸಿನಿಮಾ ಆಗಸ್ಟ್ 12ರಂದು ತೆರೆಗೆ ಬರುತ್ತಿವೆ. ಮೊದಲ ಭಾಗ ಸಕ್ಸಸ್ ಆದ ಖುಷಿಯಲ್ಲಿ ಭಟ್ ಎರಡನೇ ಭಾಗ ತಯಾರಿಸಿದ್ದಾರೆ. ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ಪವನ್ ಕುಮಾರ್ ಮತ್ತು ದಿಗಂತ್ ವಿದ್ಯಾರ್ಥಿಗಳಾಗಿ ನಟನೆ ಮಾಡಿದ್ದಾರೆ. ಅನಂತ್ ನಾಗ್ ಅವರು ಎಂಎ ಕನ್ನಡ ಮೇಷ್ಟ್ರು ಆಗಿ ಕಾಣಿಸಿಕೊಂಡಿದ್ದಾರೆ.

ಅನಂತನಾಗ್‌ ಮತ್ತು ಮೂರು ಜನ ನಾಯಕರ ನಡುವಿನ ದೃಶ್ಯಗಳು ಸಿನಿಮಾದಲ್ಲಿ ಬಹಳ ಮುಖ್ಯ ಎಂದು ನಿರ್ದೇಶಕ ಯೋಗರಾಜ್ ಭಟ್ ಹೇಳಿದ್ದಾರೆ.

‘ಗಾಳಿಪಟ 2’ ಚಿತ್ರಕ್ಕೆ ಸಂತೋಷ್‌ ರೈ ಪಾತಾಜೆ ಸಿನಿಮಾಟೋಗ್ರಫಿ ಮಾಡಿದ್ದಾರೆ. ರಮೇಶ್‌ ರೆಡ್ಡಿ ಚಿತ್ರ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಸಂಯುಕ್ತಾ ಮೆನನ್‌, ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ ಸೇರಿದಂತೆ ಅನೇಕರು ನಟಿಸಿದ್ದಾರೆ. ಸಿನಿಮಾ ಯಾವ ರೀತಿ ಪ್ರೇಕ್ಷಕರ ಹೃದಯ ಗೆಲ್ಲುತ್ತದೆ ಎನ್ನುವುದಕ್ಕೆ ಉತ್ತರ ಆಗಸ್ಟ್ 12ರಂದು ಸಿಗಲಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!