ಆರ್.ಎಸ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಚಿತ್ರ ಸೆಪ್ಟೆಂಬರ್ 9 ರಂದು ತೆರೆಗೆ ಬರುವ ಸಾಧ್ಯತೆಯಿದೆ.
“ಕಾಟನ್ ಪೇಟೆ ಗೇಟ್” ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಈ ಚಿತ್ರ ಚೆನ್ನಾಗಿ ಮೂಡಿ ಬಂದಿದೆ ಅಂದರೆ ಅದಕ್ಕೆ ಇಡೀ ಚಿತ್ರತಂಡದ ಶ್ರಮ ಕಾರಣ ಎಂದು ನಿರ್ದೇಶಕ ವೈ ರಾಜಕುಮಾರ್ ಹೇಳಿದ್ದಾರೆ.
“ಈ ಚಿತ್ರ ಮೂರು ಭಾಷೆಗಳಲ್ಲಿ ನಿರ್ಮಾಣವಾಗಿದೆ. ಆದರೆ ಮೊದಲು ಆರಂಭವಾಗಿದ್ದು ಕನ್ನಡದಲ್ಲಿ. ಅರಣ್ಯ ಪ್ರದೇಶ, ಸುಂದರವಾದ ಪರಿಸರದಲ್ಲಿ ಚಿತ್ರೀಕರಣ ನಡೆದಿದೆ. ಇದೊಂದು ಆಕ್ಷನ್, ಕಾಮಿಡಿ, ಸಸ್ಪೆನ್ಸ್, ಸೆಂಟಿಮೆಂಟ್ ಎಲ್ಲಾ ಅಂಶಗಳಿರುವ ಕಮರ್ಷಿಯಲ್ ಚಿತ್ರ. ರಾಜಕುಮಾರ್ ಬಹಳ ಚೆನ್ನಾಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ನಟಿಸಲು ನನಗೆ ತುಂಬಾ ಖುಷಿಯಾಗಿದೆ ಎಂದು ನಾಯಕ ವೇಣುಗೋಪಾಲ್ ಹೇಳಿದ್ದಾರೆ.
“ಸೆಪ್ಟೆಂಬರ್ 9 ರಂದು ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಆರ್ ಎಸ್ ಶ್ರೀನಿವಾಸ್ ಕೋರಿದ್ದಾರೆ.
ಸಂಗೀತ ನಿರ್ದೇಶಕ ಪ್ರಸು, ಛಾಯಾಗ್ರಹಣ ಯೋಗಿ ರೆಡ್ಡಿ ಅವರದ್ದು ಆಗಿದೆ.
___

Be the first to comment