ರಕ್ಷಾ ಬಂಧನದ ಅಂಗವಾಗಿ ಪುನೀತ್ ರಾಜ್ಕುಮಾರ್ ಫೋಟೋ ಇರುವ ರಾಖಿಗಳು ಮಾರುಕಟ್ಟೆಗೆ ಬಂದಿದ್ದು ಗ್ರಾಹಕರನ್ನು ಆಕರ್ಷಿಸುತ್ತಿವೆ.
ಆಗಸ್ಟ್ 11ರಂದು ಅಂದರೆ ನಾಳೆ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುತ್ತಿದ್ದು, ಬಗೆಬಗೆಯ ರಾಖಿಗಳು ಮಾರುಕಟ್ಟೆಯಲ್ಲಿವೆ. ರಕ್ಷಾ ಬಂಧನದ ಪ್ರಯುಕ್ತ ಮಾರುಕಟ್ಟೆಯಲ್ಲಿ ಪುನೀತ್ ರಾಜ್ಕುಮಾರ್ ಅವರ ಫೋಟೋ ಇರುವ ಅಪ್ಪು ರಾಖಿ ಬಂದಿದ್ದು, ಜನ ಇಷ್ಟಪಟ್ಟು ಖರೀದಿಸುತ್ತಿದ್ದಾರೆ.
ಪ್ರತಿ ವಿಶೇಷ ಸಂದರ್ಭದಲ್ಲೂ, ಹಬ್ಬ-ಹರಿದಿನಗಳಲ್ಲೂ ಪುನೀತ್ ಅವರ ಸ್ಮರಣೆ ಇದ್ದೇಇರುತ್ತದೆ. ಈಗ ಅಪ್ಪು ರಾಖಿಗಳು ಗಮನ ಸೆಳೆಯುತ್ತಿವೆ.
ಕೊಪ್ಪಳ ಸೇರಿದಂತೆ ಕರ್ನಾಟಕದ ಹಲವು ಕಡೆಗಳಲ್ಲಿಅಪ್ಪು ಅವರ ಫೋಟೋ ಇರುವ ರಾಖಿಗಳನ್ನು ತಯಾರಿಸಲಾಗಿದ್ದು, ಈ ಮೂಲಕ ರಕ್ಷಾ ಬಂಧನಕ್ಕೆ ವಿಶೇಷ ಕಳೆ ಬಂದಿದೆ.
ಪುನೀತ್ ಅವರ ಮಾದರಿ ಕೆಲಸಗಳನ್ನು ಪರಿಗಣಿಸಿ, ರಾಜ್ಯ ಸರ್ಕಾರ ಮರಣೋತ್ತರವಾಗಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ನವೆಂಬರ್ 1ರಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಪುನೀತ್ ನಟಿಸಿರುವ ‘ಗಂಧದ ಗುಡಿ’ ಸಾಕ್ಷ್ಯಚಿತ್ರದಲ್ಲಿ ಕರುನಾಡಿನ ಅರಣ್ಯ ಮತ್ತು ವನ್ಯ ಜೀವಿಗಳ ಬಗ್ಗೆ ಬಿಚ್ಚಿಡಲಾಗಿದೆ. ಈ ಡಾಕ್ಯುಮೆಂಟರಿ ಮೂವಿ ಅಕ್ಟೋಬರ್ 28ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.
___
Be the first to comment