ಡಾಲಿ ಧನಂಜಯ್ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು ಮುಂದಾಗಿದ್ದಾರೆ.
ಧನಂಜಯ್, ತಮ್ಮ ಜನ್ಮದಿನದಂದು ಹೊಸ ಘೋಷಣೆಯೊಂದನ್ನು ಮಾಡಿದ್ದಾರೆ. ಇನ್ನು ಮುಂದೆ ಪ್ರತಿ ವರ್ಷ ಡಾಲಿ ಪಿಕ್ಚರ್ಸ್ ವತಿಯಿಂದ ಕನಿಷ್ಠ ಎರಡು ಸಿನಿಮಾಗಳನ್ನಾದರೂ ನಿರ್ಮಾಣ ಮಾಡಲಾಗುವುದು. ಇದರಲ್ಲಿ ಒಂದು ಸಿನಿಮಾವನ್ನು ಹೊಸ ಪ್ರತಿಭೆಗಳಿಗೆ ಮೀಸಲಿಡುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಡಾಲಿ ಪಿಕ್ಚರ್ಸ್ ಸಂಸ್ಥೆ, ‘ಹೊಸಬರ ಆರಂಭದ ಕಲ್ಲುಮುಳ್ಳಿನ ದಾರಿಯನ್ನು ಹೇಗೆ ಸುಲಭವಾಗಿಸಬಹುದೆಂದು ಸ್ವತಃ ಆ ದಾರಿಯಲ್ಲಿ ನಡೆದುಬಂದಿರುವ ‘ಡಾಲಿ’ ಧನಂಜಯ್ ಅವರ ಆಲೋಚನೆಯೇ ಈ ಘೋಷಣೆಗೆ ಹಿನ್ನೆಲೆ. ಇನ್ನು ಮುಂದೆ ಪ್ರತಿ ವರ್ಷ ಡಾಲಿ ಪಿಕ್ಚರ್ಸ್ ವತಿಯಿಂದ ಕನಿಷ್ಠ ಎರಡು ಸಿನಿಮಾಗಳನ್ನಾದರೂ ನಿರ್ಮಾಣ ಮಾಡುವುದಾಗಿ, ಇದರಲ್ಲಿ ಮುಖ್ಯವಾಗಿ ಒಂದು ಸಿನಿಮಾವನ್ನು ಕೇವಲ ಹೊಸ ಪ್ರತಿಭೆಗಳಿಗೆ ಮೀಸಲಿಡುವುದಾಗಿ ಘೋಷಿಸುತ್ತೇವೆ. ಈ ಹೊಸ ಪ್ರಯತ್ನಕ್ಕೆ ಹಾರೈಕೆಯಿರಲಿ’ ಎಂದು ಹೇಳಲಾಗಿದೆ.
ಈಗಾಗಲೇ ಡಾಲಿ ಪಿಕ್ಚರ್ಸ್ ಸಂಸ್ಥೆಯ ಮೂಲಕ ‘ಬಡವ ರಾಸ್ಕಲ್’ ಹಾಗೂ ‘ಹೆಡ್ಬುಷ್’ ಸಿನಿಮಾ ನಿರ್ಮಾಣ ಮಾಡಿ ಅನುಭವ ಪಡೆದುಕೊಂಡಿರುವ ಧನಂಜಯ್ ಹೊಸಬರಿಗೆ ಅವಕಾಶ ನೀಡಲು ಮುಂದಾಗಿದ್ದಾರೆ. ಇದು ಪ್ರಶಂಸೆಗೆ ಪಾತ್ರವಾಗಿದೆ.
__
Be the first to comment