ಲೂಸಿಯಾ, ಯೂಟರ್ನ್ ಸಿನಿಮಾ ಖ್ಯಾತಿಯ ಪವನ್ ಜತೆಗೆ ಸಿನಿಮಾ ಮಾಡುವುದಾಗಿ ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಕನ್ನಡದಲ್ಲಿ ಪವನ್ ಹೇಳಿದ ಕಥೆ ಇಷ್ಟವಾಗಿದ್ದು ಅವರ ಜೊತೆ ಸಿನಿಮಾ ಮಾಡುತ್ತೇನೆ” ಎಂದು ವಿಕ್ರಮ್ ತಿಳಿಸಿದ್ದಾರೆ.
ಪವನ್ ಚಿತ್ರದ ಮೂಲಕ ಚಿಯಾನ್ ವಿಕ್ರಂ ಕನ್ನಡಕ್ಕೆ ಬರಲಿದ್ದಾರೆ. ಬಹುಭಾಷೆಗಳಲ್ಲಿ ಮೂಡಿಬರಲಿರುವ ಈ ಸಿನಿಮಾ ಬಗ್ಗೆ ನಿರ್ಮಾಪಕರು ಅಧಿಕೃತ ಘೋಷಣೆ ಮಾಡಬೇಕಿದೆ.
ವಿಕ್ರಮ್ ನಟನೆಯ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ನಿರ್ಮಾಣವಾಗಲಿದೆ ಎಂದು ಹೇಳಲಾಗಿದೆ. ಪವನ್ ಕುಮಾರ್ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ಫಹದ್ ಫಾಸಿಲ್ ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು.
ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಕೋಬ್ರಾ’ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗೆ ಬರಲಿದೆ. ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸುತ್ತಿದೆ.
____

Be the first to comment