Skip to content
ಡಾಲಿ ಧನಂಜಯ್ ಹಾಗೂ ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಮಾನ್ಸೂನ್ ರಾಗ ಸಿನಿಮಾದ ರಿಲೀಸ್ ದಿನಾಂಕ ಕೊನೆಗೂ ಫಿಕ್ಸ್ ಆಗಿದೆ.
ಸೆಪ್ಟೆಂಬರ್ 16 ರಂದು ಸಿನಿಮಾ ಥಿಯೇಟರ್ ಗೆ ಬರುವುದು ಪಕ್ಕಾ ಆಗಿದೆ. ಈ ಬಗ್ಗೆ ಚಿತ್ರತಂಡ ರಿಲೀಸ್ ದಿನಾಂಕ ಘೋಷಿಸಿದೆ.
ಈ ಚಿತ್ರ ಆಗಸ್ಟ್ ನಲ್ಲೇ ತೆರೆ ಕಾಣಬೇಕಿತ್ತು. ಆದರೆ ಕಾರಣಾಂತರಗಳಿಂದ ಎರಡು ಬಾರಿ ರಿಲೀಸ್ ದಿನಾಂಕ ಮುಂದೂಡಿಕೆಯಾಗಿತ್ತು.
ಅನೂಪ್ ಸಿಳೀನ್ ಸಂಗೀತ ಸಂಯೋಜನೆಯ ಸುಮಧುರ ಹಾಡುಗಳ ಮೂಲಕ, ವಿಶಿಷ್ಟ ಟ್ರೈಲರ್ ಮೂಲಕ ಈಗಾಗಲೇ ಮಾನ್ಸೂನ್ ರಾಗ ಜನರ ಗಮನ ಸೆಳೆಯುವಲ್ಲಿ ಯಶಸ್ವಿ ಆಗಿದೆ.
ಮಾಸ್ ಮತ್ತು ಕ್ಲಾಸ್ ಸಿನಿಮಾ ಇದಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಈ ಸಿನಿಮಾ 70-80ರ ದಶಕದಲ್ಲಿ ಕರಾವಳಿ ಭಾಗದಲ್ಲಿ ನಡೆಯುವ ಕಥೆಯನ್ನು ಒಳಗೊಂಡಿದೆ.
ಸಿನಿಮಾವನ್ನು ರವೀಂದ್ರನಾಥ್ ನಿರ್ದೇಶನ ಮಾಡಿದ್ದು, ಎ.ಆರ್. ವಿಖ್ಯಾತ್ ನಿರ್ಮಾಣ ಮಾಡಿದ್ದಾರೆ. ಸಂಭಾಷಣೆಯನ್ನು ಗುರು ಕಶ್ಯಪ್ ಬರೆದಿದ್ದಾರೆ.
___

Post Views:
182
Translate »
error: Content is protected !!
Be the first to comment