ನಿರ್ದೇಶಕ ಯೋಗರಾಜ್ ಭಟ್ ಅವರು ಹೊಸ ಸಿನಿಮಾದ ಟೈಟಲ್ ಘೋಷಣೆ ಮಾಡಿದ್ದಾರೆ.ಗಾಳಿಪಟ 2 ಸಿನಿಮಾದ ಯಶಸ್ಸಿನಲ್ಲಿರುವ ಭಟ್ಟರ ಸಿನಿಮಾದಲ್ಲಿ ತಮಿಳು ನಟ ಪ್ರಭುದೇವ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ಯಾವ ಪಾತ್ರ ಎಂದು ರಿವೀಲ್ ಮಾಡಿಲ್ಲ.
ಸಿನಿಮಾದ ಹೆಸರು ರಿವೀಲ್ ಮಾಡಲಾಗಿದ್ದು, ಚಿತ್ರಕ್ಕೆ K ಕರಟಕ D ದಮನಕ ಎಂಬ ವಿಭಿನ್ನ ಶೀರ್ಷಿಕೆ ಇಡಲಾಗಿದೆ.
ಈ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಭರದಿಂದ ಸಾಗುತ್ತಿದೆ. ಸದ್ಯ ಶಿವರಾಜ್ ಕುಮಾರ್, ಪ್ರಭುದೇವ ನಡುವಿನ ಸನ್ನಿವೇಶ ನಡೆಯುತ್ತಿದೆ. ಶಿವಣ್ಣ ಹಾಗು ಪ್ರಭುದೇವ ಜೊತೆಗೆ ತನಿಕೆಲ್ಲ ಭರಣಿ, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.
ರಾಕ್ಲೈನ್ ವೆಂಕಟೇಶ್ ಪ್ರೊಡಕ್ಷನ್ ನಂ. 47 ಹೆಸರಿನಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಇದೆ
____

Be the first to comment