ಎಕ್ಸಾಂ ಸಾಂಗ್ ರಿಲೀಸ್

ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ 2’ ಚಿತ್ರದ ‘exam ಸಾಂಗ್’ ರಿಲೀಸ್ ಆಗಿದೆ.

ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಸಾಂಗ್ ಬಿಡುಗಡೆಯಾಗಿದ್ದು, ಸಾಕಷ್ಟು ವೀಕ್ಷಣೆ ಪಡೆದಿದೆ.

ಅರ್ಜುನ್ ಜನ್ಯ ಈ ಹಾಡಿಗೆ ಸಂಗೀತ ಸಂಯೋಜನೆ ನೀಡುವ ಜೊತೆಗೆ ವಿಜಯ್ ಪ್ರಕಾಶ್ ಜೊತೆ ಧ್ವನಿಗೂಡಿಸಿದ್ದಾರೆ. ಯೋಗರಾಜ್ ಭಟ್ ಸಾಹಿತ್ಯವಿದೆ.

ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಶ್ರೀಮತಿ ಉಮಾ ಹಾಗೂ ರಮೇಶ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ದೂದ್ ಪೇಡ ದಿಗಂತ್, ಪವನ್ ಕುಮಾರ್, ಶರ್ಮಿಳಾ ಮಾಂಡ್ರೆ, ಸೋನಾಲ್ ಮೊಂತೆರೊ, ಬುಲೆಟ್ ಪ್ರಕಾಶ್ ಹಾಗೂ ಹಿರಿಯ ನಟ ಅನಂತ್ ನಾಗ್ ಸೇರಿದಂತೆ ಹಲವು ಕಲಾವಿದರು ಬಣ್ಣಹಚ್ಚಿದ್ದಾರೆ.

ಆಗಸ್ಟ್ 12ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದ ಈ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!