ಇಂದು ಪ್ರಾಯಶಃ ಹಾಡು ರಿಲೀಸ್

ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ 2’ ಚಿತ್ರದ ಸೋನು ನಿಗಮ್ ಧ್ವನಿಯಲ್ಲಿ ಮೂಡಿಬಂದಿರುವ ಪ್ರಾಯಶಃ ಎಂಬ ಹಾಡು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.

ಈ ಹಾಡಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದು, ಯೋಗರಾಜ್ ಭಟ್ ಸಾಹಿತ್ಯವಿದೆ.

ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಶ್ರೀಮತಿ ಉಮಾ ಹಾಗೂ ರಮೇಶ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಗೋಲ್ಡನ್ ಸ್ಟಾರ್ ಗಣೇಶ್, ದೂದ್ ಪೇಡಾ ದಿಗಂತ್, ವೈಭವಿ, ಪವನ್ ಕುಮಾರ್, ಶರ್ಮಿಳಾ ಮಾಂಡ್ರೆ ಹಾಗೂ ಸೋನಾಲ್ ಮೊಂತೇರೊ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಗಣೇಶ್‌ ಪುತ್ರ ವಿಹಾನ್‌ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಸಿನಿಮಾದಲ್ಲಿ ಹಿರಿಯ ನಟ ಅನಂತ್ ನಾಗ್ ಅವರು ಕನ್ನಡ ಮೇಷ್ಟ್ರು ಪಾತ್ರದಲ್ಲಿ ನಟಿಸಿದ್ದಾರೆ. ಸಂತೋಷ್‌ ರೈ ಪಾತಾಜೆ ಸಿನಿಮಾಟೋಗ್ರಫಿಯಿರುವ ಈ ಚಿತ್ರದಲ್ಲಿ ಪದ್ಮಜಾ ರಾವ್‌, ಸುಧಾ​ ಬೆ​ಳ​ವಾಡಿ, ರಂಗಾ​ಯಣ ರಘು ಸೇರಿದಂತೆ ಮುಂತಾದವರು ನಟಿಸುತ್ತಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!