‘ಪೊನ್ನಿಯಿನ್ ಸೆಲ್ವನ್’ ಸಿನಿಮಾದ ಒಟಿಟಿ ಹಕ್ಕುಗಳನ್ನು 125 ಕೋಟಿ ರೂಪಾಯಿ ನೀಡಿ ‘ಅಮೇಜಾನ್ ಪ್ರೈಂ ವಿಡಿಯೋ’ ಸಂಸ್ಥೆ ಖರೀದಿಸಿದೆ.
ಸೆಪ್ಟೆಂಬರ್ 30ರಂದು ಚಿತ್ರಮಂದಿರದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ಮಣಿರತ್ನಂ ನಿರ್ದೇಶನ ಮಾಡಿದ್ದಾರೆ.
ಲಾಕ್ಡೌನ್ ಬಳಿಕ ಒಟಿಟಿಯಲ್ಲಿ ಮನರಂಜನೆ ಬಯಸುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಬಹುನಿರೀಕ್ಷಿತ ಸಿನಿಮಾಗಳನ್ನು ಕೊಂಡುಕೊಳ್ಳಲು ಒಟಿಟಿ ಸಂಸ್ಥೆಗಳು ಮುಂದೆ ಬರುತ್ತಿವೆ.
‘ಪೊನ್ನಿಯಿನ್ ಸೆಲ್ವನ್’ ಚಿತ್ರದಲ್ಲಿ ಬಹುತಾರಾಗಣ ಇದೆ. ಐಶ್ವರ್ಯಾ ರೈ ಬಚ್ಚನ್, ಚಿಯಾನ್ ವಿಕ್ರಮ್, ಕಾರ್ತಿ, ಜಯಂ ರವಿ, ತ್ರಿಷಾ, ಪ್ರಕಾಶ್ ರಾಜ್ ಮುಂತಾದವರು ಅಭಿನಯಿಸಿದ್ದಾರೆ. ಎ.ಆರ್. ರೆಹಮಾನ್ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ.
‘ಪೊನ್ನಿಯಿನ್ ಸೆಲ್ವಂ’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಮೂಲ ತಮಿಳಿನ ಈ ಚಿತ್ರ ಕನ್ನಡ, ಹಿಂದಿ, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್ ಆಗಿ ರಿಲೀಸ್ ಆಗುತ್ತಿದೆ. ಎಲ್ಲ ಭಾಷೆಯಲ್ಲೂ ಈ ಟ್ರೇಲರ್ ಹೆಚ್ಚಿನ ವೀಕ್ಷಣೆ ಕಂಡಿದೆ.
ಮದ್ರಾಸ್ ಟಾಕೀಸ್ ಮತ್ತು ಲೈಕಾ ಪ್ರೊಡಕ್ಷನ್ಸ್ ಬ್ಯಾನರ್‌ಗಳ ಅಡಿಯಲ್ಲಿ ಇರುವರ್ ಚಲನಚಿತ್ರ ನಿರ್ಮಾಪಕ ಮತ್ತು ಅಲ್ಲಿರಾಜ ಸುಭಾಸ್ಕರನ್ ಚಿತ್ರ ನಿರ್ಮಿಸಿದ್ದಾರೆ.
___
Be the first to comment