‘ಬನಾರಸ್’ ಚಿತ್ರದ ಟ್ರೈಲರ್ ಒಂದೇ ದಿನದಲ್ಲಿ ಎಲ್ಲ ಭಾಷೆಯ ವರ್ಷನ್ಗಳಿಂದ ಒಟ್ಟು 40 ಲಕ್ಷಕ್ಕೂ ಅಧಿಕ ವೀವ್ಸ್ ಪಡೆದು ಗಮನ ಸೆಳೆದಿದೆ.
ಟ್ರೇಲರ್ ನೋಡಿದ ಎಲ್ಲರೂ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಟೈಮ್ ಟ್ರಾವೆಲಿಂಗ್ ಪರಿಕಲ್ಪನೆಯನ್ನು ಇಟ್ಟುಕೊಂಡು ‘ಬನಾರಸ್’ ಸಿನಿಮಾ ಮಾಡಲಾಗಿದೆ. ಝೈದ್ ಖಾನ್ ನಟನೆಯ ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ. ನಾಯಕಿಯಾಗಿ ಸೋನಲ್ ಮಾಂಥೆರೋ ನಟಿಸಿದ್ದಾರೆ.
ಈ ಮೊದಲು ಬಿಡುಗಡೆ ಆಗಿದ್ದ ‘ಮಾಯಗಂಗೆ..’ ಸಾಂಗ್ ಕೂಡ ಜನಮೆಚ್ಚುಗೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ನಿರ್ದೇಶಕ ಜಯತೀರ್ಥ ಅವರು ಈ ಸಿನಿಮಾಕ್ಕೆ ಆಕ್ಷನ್-ಕಟ್ ಹೇಳಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಬನಾರಸ್’ ಚಿತ್ರ ಬಿಡುಗಡೆ ಆಗಲಿದೆ. ಕನ್ನಡ, ತೆಲುಗು, ಮಲಯಾಳಂ, ಹಿಂದಿ ಹಾಗೂ ತಮಿಳು ಭಾಷೆಯಲ್ಲಿ ಟ್ರೇಲರ್ ರಿಲೀಸ್ ಮಾಡಲಾಗಿದೆ.
ಅಜನೀಶ್ ಬಿ. ಲೋಕನಾಥ್ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅದ್ವೈತ್ ಗುರುಮೂರ್ತಿ ಛಾಯಾಗ್ರಹಣ ಮಾಡಿದ್ದಾರೆ. ತಿಲಕ್ ರಾಜ್ ಬಲ್ಲಾಳ್ ಅವರು ಬಂಡವಾಳ ಹೂಡಿದ್ದಾರೆ. ನವೆಂಬರ್ 4ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.
___

Be the first to comment