ಹಾಟ್ ಆಗಿರುವ ದಿಲ್ ಪಸಂದ್ ಟೀಸರ್

ಡಾರ್ಲಿಂಗ್ ಕೃಷ್ಣ, ಮೇಘಾ ಶೆಟ್ಟಿ, ನಿಶ್ವಿಕಾ ನಾಯ್ಡು ಪ್ರಮುಖ ಪಾತ್ರದಲ್ಲಿರುವ ದಿಲ್ ಪಸಂದ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

ಲಾರ್ಡ್ ಗೆ ಹುಡುಗಿಯರನ್ನು ಕರೆದುಕೊಂಡು ಹೋಗುವುದು ಮಾರಕ ಎನ್ನುವ ಕಥೆಯ ಸುಳಿವು ಟೀಸರ್ ನಲ್ಲಿ ಇದೆ. ಹಾಟ್ ಆಗಿ ಟೀಸರ್ ಮೂಡಿ ಬಂದಿದ್ದು, ಪ್ರೇಕ್ಷಕರನ್ನು ಚಿತ್ರ ಯಾವ ರೀತಿ ಸೆಳೆಯುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಈ ಸಿನಿಮಾದಲ್ಲಿ ನಿಶ್ವಿಕಾ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಮೇಘಾ ಸಾಂಪ್ರದಾಯಿಕ ಸ್ಟೈಲ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನವಂಬರ್ 11 ಕ್ಕೆ ಸಿನಿಮಾ ರಿಲೀಸ್ ಆಗಲಿದೆ.

ಡಾರ್ಲಿಂಗ್ ಕೃಷ್ಣ ಅಭಿನಯದ ಲಕ್ಕಿ ಮ್ಯಾನ್ ಇತ್ತೀಚೆಗೆ ಬಿಡುಗಡೆಯಾಗಿ ಉತ್ತಮ ಗಳಿಕೆ ಮಾಡಿತ್ತು. ಈಗ ದಿಲ್ ಪಸಂದ್ ಬಗ್ಗೆ ಕುತೂಹಲ ಮೂಡಿದೆ.

ಚಿತ್ರವನ್ನು ಸುಮಂತ್ ಕ್ರಾಂತಿ ನಿರ್ಮಾಣ ಮಾಡಿದ್ದಾರೆ. ಅರ್ಜುನ್ ಜನ್ಯ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ ಚಿತ್ರದ ಹಾಟ್ ಫೋಟೋಗಳು ವೈರಲ್ ಆಗಿದ್ದು, ಗಮನ ಸೆಳೆದಿವೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!