‘ಆದಿಪುರುಷ್’ ಟೀಸರ್ ರಿಲೀಸ್ ಆದ ಬೆನ್ನಲ್ಲೆ ಚಿತ್ರತಂಡ ಹಲವು ವಿವಾದ ಮೈಮೇಲೆ ಎಳೆದುಕೊಂಡಿದೆ.
ಕಳಪೆ ಮಟ್ಟದ ವಿಎಫ್‌ಎಕ್ಸ್‌ನಿಂದಾಗಿ ವಿಪರೀತ ಟ್ರೋಲ್ ಆಗಿರುವ ಜೊತೆಗೆ ಚಿತ್ರದಲ್ಲಿ ರಾಮಾಯಣದ ಪಾತ್ರಗಳನ್ನು ತಮಗೆ ತೋಚಿದಂತೆ ಪ್ರೆಸೆಂಟ್ ಮಾಡಿರುವುದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.
ಹಿಂದು ಸಂಘಟನೆಗಳು ‘ಆದಿಪುರುಷ್’ ಟೀಸರ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿವೆ. ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ‘ಆದಿಪುರುಷ್’ ಟೀಸರ್ ಬಗ್ಗೆ ಚಿತ್ರತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ.
‘ಆದಿಪುರುಷ್’ ಸಿನಿಮಾದ ಟೀಸರ್‌ನಲ್ಲಿ ಹನುಮಂತನ ಪಾತ್ರಧಾರಿಗೆ ಲೆದರ್ ಬಟ್ಟೆಗಳನ್ನು ತೊಡಿಸಲಾಗಿದೆ. ಹನುಮನ ಸೈನ್ಯಕ್ಕೂ ಲೆದರ್ ಬಟ್ಟೆಗಳನ್ನು ತೊಡಿಸಲಾಗಿದೆ. ಇದು ಹನುಮಂತ ದೇವರಿಗೆ ಮಾಡಿದ ಅಪಮಾನ. ಹಿಂದೂ ಧರ್ಮಕ್ಕೆ ಮಾಡಿದ ಅಪಮಾನ ಎಂದು ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ದೂರಿದ್ದಾರೆ.
”ಈ ಬಗ್ಗೆ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ಪತ್ರ ಬರೆಯುತ್ತೇನೆ. ಆ ದೃಶ್ಯಗಳನ್ನು ತೆಗೆದು ಹಾಕುವಂತೆ ಮನವಿ ಮಾಡುತ್ತೇನೆ. ಅವರು ಆ ದೃಶ್ಯಗಳನ್ನು ತೆಗೆದು ಹಾಕದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.
ಸಿನಿಮಾದಲ್ಲಿ ಬಳಸಲಾಗಿರುವ ಕಳಪೆ ದರ್ಜೆಯ ವಿಎಎಫ್‌ಎಕ್ಸ್‌ನ್ನು ಪ್ರಭಾಸ್ ಅಭಿಮಾನಿಗಳು ಸೇರಿದಂತೆ ಹಲವರು ತೀವ್ರವಾಗಿ ಟೀಕಿಸಿದ್ದಾರೆ. ಟ್ರೋಲಿಂಗ್‌ಗೆ ಗುರಿಯಾಗಿರುವ ಚಿತ್ರತಂಡ ವಿಎಫ್‌ಎಕ್ಸ್ ಬದಲಾಯಿಸುತ್ತದೆಯೇ ಎಂದು ನೋಡಬೇಕಿದೆ. ಸಿನಿಮಾಕ್ಕೆ ವಿಎಫ್‌ಎಕ್ಸ್‌ಗೆ ಸುಮಾರು 300 ಕೋಟಿ ರೂಪಾಯಿ ಖರ್ಚಾಗಿದೆ ಎನ್ನಲಾಗಿದೆ.
‘ಆದಿಪುರುಷ್’ ಸಿನಿಮಾವು ರಾಮಾಯಣದ ಕತೆಯನ್ನು ಆಧರಿಸಿದೆ. ಪ್ರಭಾಸ್ ರಾಮನ ಪಾತ್ರದಲ್ಲಿ, ಸೈಫ್ ಅಲಿ ಖಾನ್ ರಾವಣನ ಪಾತ್ರದಲ್ಲಿ ನಟಿಸಿದ್ದಾರೆ. ಕೃತಿ ಸೆನನ್ ಸೀತೆಯ ಪಾತ್ರದಲ್ಲಿ ನಟಿಸಿದ್ದಾರೆ.
__
Be the first to comment