ಜೋಗಿ ಪ್ರೇಮ್, ಧ್ರುವ ಸರ್ಜಾ ಕಾಂಬಿನೇಷನ್ ನ ಹೊಸ ಸಿನಿಮಾದ ಟೈಟಲ್ ಟೀಸರ್ ಬಿಡುಗಡೆ ಕಾರ್ಯಕ್ರಮ ಅಕ್ಟೋಬರ್ 20 ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮೋಹನ್ ಲಾಲ್ ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಮೋಹನ್ ಲಾಲ್ ಅವರನ್ನು ಭೇಟಿ ಮಾಡಿರುವ ಫೋಟೋವನ್ನು ಪ್ರೇಮ್ ಹಂಚಿಕೊಂಡಿದ್ದಾರೆ. ಅಕ್ಟೋಬರ್ 20ರ ಕಾರ್ಯಕ್ರಮಕ್ಕೆ ತಮ್ಮೆಲ್ಲರ ಸಹಕಾರವಿರಲಿ ಎಂದು ಪ್ರೇಮ್ ಕೋರಿದ್ದಾರೆ.
ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದೆ. ನಾನಾ ಸಿನಿಮಾ ರಂಗದ ಕಲಾವಿದರು ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ.
ಕೆವಿಎನ್ ಪ್ರೊಡಕ್ಷನ್ ಲಾಂಛನದಲ್ಲಿ ಈ ಸಿನಿಮಾ ಮೂಡಿ ಬರಲಿದೆ. ಈಗಾಗಲೇ ಚಿತ್ರಕ್ಕೆ ಮುಹೂರ್ತ ಮೈಸೂರಿನಲ್ಲಿ ನಡೆದಿದೆ.
ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಚಿತ್ರಕ್ಕಿದೆ.
____

Be the first to comment