ಇದೇ 14ರಿಂದ ಬಿಡುಗಡೆ ಸಿದ್ಧವಾಯ್ತು ʼಚಾಂಪಿಯನ್ʼ

ಸ್ಯಾಂಡಲ್ ವುಡ್ ನಲ್ಲಿ ಬಹಳಷ್ಟು ಯುವ ಪ್ರತಿಭೆಗಳ ಚಿತ್ರವು ಪ್ರೇಕ್ಷಕರ ಹೃದಯವನ್ನು ಗೆದ್ದು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಆ ನಿಟ್ಟಿನಲ್ಲಿ ಇದೇ ವಾರ ರಾಜ್ಯಾದ್ಯಂತ ಅದ್ಧೂರಿಯಾಗಿ ಅಬ್ಬರಿಸಲು ಬರುತ್ತಿದ್ದಾನೆ “ಚಾಂಪಿಯನ್”. ಲವ್, ಆ್ಯಕ್ಷನ್, ಸೆಂಟಿಮೆಂಟ್ ಸೇರಿದಂತೆ ಸಂಪೂರ್ಣ ಮನರಂಜನೆಯ ಎಳೆಯೊಂದಿಗೆ ಪ್ರೇಕ್ಷಕರ ಮುಂದೆ ಬರುತ್ತಿದೆ. ಶಿವಂ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿವಾನಂದ್. ಎಸ್. ನೀಲಣ್ಣನವರ್ ನಿರ್ಮಾಣದಲ್ಲಿ ಅದ್ದೂರಿಯಾಗಿ ಬಂದಿರುವ ಈ ಚಿತ್ರವನ್ನ ಶಾಹುರಾಜ್ ಶಿಂಧೆ ನಿರ್ದೇಶನ ಮಾಡಿದ್ದಾರೆ. ನಿರ್ದೇಶಕ ಅಗಲಿಕೆಯ ನಂತರವೂ ಚಿತ್ರತಂಡ ಬಹಳಷ್ಟು ಶ್ರಮವಹಿಸಿ “ಚಾಂಪಿಯನ್ ” ಚಿತ್ರವನ್ನ ಸಿದ್ಧಪಡಿಸಿ ಅದ್ದೂರಿಯಾಗಿ ಈ ವಾರ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ.

ಇದೊಂದು ಕ್ರೀಡಾ ಕಥಾಹಂದರ ಹೊಂದಿರುವ ಚಿತ್ರವಾಗಿದ್ದು, ಯುವ ನಟ ಧನ್ ಪಾಲ್ ಬೆಳ್ಳಿಪರದೆಯ ಮೇಲೆ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇವರಿಗೆ ಜೋಡಿಯಾಗಿ ಅದಿತಿ ಪ್ರಭುದೇವ ನಾಯಕಿಯಾಗಿದ್ದು, ಉಳಿದ ತಾರಾಬಳಗದಲ್ಲಿ ” ಹಿರಿಯ ನಟ ದೇವರಾಜ್, ಸುಮನ್, ಪ್ರದೀಪ್ ರಾಹುತ್, ಚಿಕ್ಕಣ್ಣ, ಆದಿ ಲೋಕೇಶ್, ರಂಗಾಯಣ ರಘು, ಅವಿನಾಶ್, ಕಾಕ್ರೋಜ್ ಸುಧಿ, ಶೋಭರಾಜ್, ಅಶೋಕ್ ಶರ್ಮ, ಪ್ರಶಾಂತ್ ಸಿದ್ದಿ, ಗಿರಿ, ಮಂಡ್ಯ ರಮೇಶ್ ಮುಂತಾದವರು ಕಾಣಿಸಿಕೊಂಡಿದ್ದಾರೆ. ವಿಶೇಷವಾಗಿ ಈ ಚಿತ್ರದಲ್ಲಿ ಬಾಲಿವುಡ್ ನ ಮಾದಕ ಚೆಲುವೆ ಸನ್ನಿಲಿಯೋನ್ ಸಹ ನಟಿಸಿದ್ದಾರೆ. ಈ ಚಾಂಪಿಯನ್ ಚಿತ್ರದ ವಿಶೇಷ ಹಾಡಿನಲ್ಲಿ ಕಾಣಿಸಿಕೊಂಡಿರುವ ಸನ್ನಿ ಲಿಯೋನ್ ಹಾಡು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿ ಪಡ್ಡೆ ಹುಡುಗರ ಹೃದಯ ಗೆದ್ದಿದೆ.

ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಮಾಡಿದ್ದು , ಸರವಣನ್ ನಟರಾಜನ್ ಛಾಯಾಗ್ರಹಣ, ವೆಂಕಿ .ಯು. ಡಿ. ವಿ ಸಂಕಲನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನವಿರುವ “ಚಾಂಪಿಯನ್” ಚಿತ್ರಕ್ಕೆ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಬಹಳಷ್ಟು ನಿರೀಕ್ಷೆಯೊಂದಿಗೆ ಸಿದ್ಧವಾಗಿರುವ ಈ “ಚಾಂಪಿಯನ್” ಚಿತ್ರ ರಾಜ್ಯಾದ್ಯಂತ ಈಗಾಗಲೇ ಅದ್ಧೂರಿ ಪ್ರಚಾರ ನಡೆಸಿದ್ದು, ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿ ನಿಂತಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!