ತಮಿಳುನಾಡಿನಲ್ಲಿ ಬನಾರಸ್ ಚಿತ್ರದನ್ನು ವಿತರಿಸುವ ಹಕ್ಕನ್ನು ಪ್ರತಿಷ್ಠಿತ ವಿತರಣಾ ಸಂಸ್ಥೆಯಾಗಿರುವ ಶಕ್ತಿ ಫಿಲಂ ಫ್ಯಾಕ್ಟರಿ ಪಡೆದಿದೆ.
ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ನ ಕರ್ನಾಟಕ, ಕೇರಳ ಮತ್ತು ಉತ್ತರ ಭಾರತದ ಬನಾರಸ್ ವಿತರಣಾ ಹಕ್ಕುಗಳು ಖ್ಯಾತ ಸಂಸ್ಥೆಗಳ ಪಾಲಾಗಿವೆ.
ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ ಬನಾರಸ್ ಈಗಾಗಲೇ ಹಾಡುಗಳು ಮತ್ತು ಟ್ರೈಲರ್ ಮೂಲಕ ಗಮನ ಸೆಳೆದಿದೆ.
ಚಿತ್ರವನ್ನು ತಿಲಕ್ ರಾಜ್ ಬಲ್ಲಾಳ್ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಚಿತ್ರ ಕನ್ನಡ ಸೇರಿದಂತೆ ಮಲಯಾಳಂ ತಮಿಳು, ತೆಲುಗು, ಹಿಂದಿ ಭಾಷೆಯಲ್ಲಿ ರಿಲೀಸ್ ಆಗಲಿದೆ.
ನಾಯಕನಾಗಿ ಝೈದ್ ಖಾನ್, ನಾಯಕಿಯಾಗಿ ಸೋನಲ್ ಮೊಂತೆರಿಯೋ ನಟಿಸಿದ್ದಾರೆ. ಚಿತ್ರದಲ್ಲಿ ಸುಜಯ್ ಶಾಸ್ತ್ರಿ, ದೇವರಾಜ್, ಅಚ್ಯುತ್ ಕುಮಾರ್, ಸ್ವಪ್ನಾ ಮುಂತಾದವರು ನಟಿಸಿದ್ದಾರೆ.
ಬನಾರಸ್ ಗೆ ಅಜನೀಶ್ ಬಿ ಲೋಕನಾಥ್ ಸಂಗೀತ ನಿರ್ದೇಶನ, ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಇದೆ. ಇದೇ ನವೆಂಬರ್ 4 ರಂದು ಚಿತ್ರ ಬಿಡುಗಡೆ ಆಗಲಿದೆ.
___





Be the first to comment