ನ.11ಕ್ಕೆ ಯಶೋದಾ ರಿಲೀಸ್

ಸಮಂತಾ ‌ನಟನೆಯ ಯಶೋದಾ ಸಿನಿಮಾ ನವೆಂಬರ್ 11ರಂದು ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.

ಶ್ರೀದೇವಿ ಪ್ರೊಡಕ್ಷನ್‌ನ 14ನೇ ಸಿನಿಮಾ ಇದಾಗಿದ್ದು, ಹರಿ ಮತ್ತು ಹರೀಶ್‌ ನಿರ್ದೇಶನ ಮಾಡಿದ್ದಾರೆ. ಶಿವಲೆಂಕಾ ಕೃಷ್ಣ ಪ್ರಸಾದ್‌ ಚಿತ್ರ ನಿರ್ಮಿಸಿದ್ದಾರೆ.

ಯಶೋದಾ ಚಿತ್ರದಲ್ಲಿ ವರಲಕ್ಷ್ಮೀ ಶರತ್‌ಕುಮಾರ್, ಉನ್ನಿ ಮುಕುಂದನ್, ರಾವ್ ರಮೇಶ್, ಮುರಳಿ ಶರ್ಮಾ, ಸಂಪತ್ ರಾಜ್, ಶತ್ರು, ಮಧುರಿಮಾ, ಕಲ್ಪಿಕಾ ಗಣೇಶ್, ದಿವ್ಯಾ ಶ್ರೀಪಾದ, ಪ್ರಿಯಾಂಕಾ ಶರ್ಮಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ಚಿತ್ರಕ್ಕೆ ಮಣಿಶರ್ಮ ಹಿನ್ನೆಲೆ ಸಂಗೀತವಿದೆ. ಎಂ. ಸುಕುಮಾರ್‌ ಛಾಯಾಗ್ರಹಣ ಮಾಡಿದ್ದಾರೆ. ರಾಮಜೋಗಯ್ಯ ಶಾಸ್ತ್ರಿ ಅವರ ಸಾಹಿತ್ಯ ಈ ಚಿತ್ರಕ್ಕಿದೆ.

ಕನ್ನಡದಲ್ಲಿ ಯಶೋದಾ ಸಿನಿಮಾದ ಟೀಸರ್‌ ಬಿಡುಗಡೆಗೊಂಡಿದ್ದು, ಚಿತ್ರಪ್ರೇಮಿಗಳಿಂದ ಮೆಚ್ಚುಗೆ ಪಡೆದಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!