ಕನ್ನಡ ರಾಜ್ಯೋತ್ಸವದ ದಿನವಾದ ಇಂದು ಪ್ರತಿಷ್ಠಿತ “ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಮರಣೋತ್ತರವಾಗಿ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ನೀಡಲಾಗುತ್ತಿದೆ.
“ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕಾಗಿ ವಿಧಾನಸೌಧದ ಮುಂಭಾಗ ಭರ್ಜರಿ ಸಿದ್ಧತೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಖಸೂಪರ್ ಸ್ಟಾರ್ ರಜನಿಕಾಂತ್, ಜೂನಿಯರ್ ಎನ್‌ಟಿಆರ್, ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ, ಕನ್ನಡ ಚಲನಚಿತ್ರ ರಂಗದ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕಾಗಿ ವಿಧಾನಸೌಧದ ಆವರಣವನ್ನು ಸಿಂಗರಿಸಲಾಗಿದೆ.
ಪುನೀತ್ ರಾಜ್‌ಕುಮಾರ್ ಅವರ ಕುಟುಂಬಕ್ಕೆ ಸರ್ಕಾರದಿಂದ ಸೋಮವಾರ ಅಧಿಕೃತ ಆಹ್ವಾನ ನೀಡಲಾಯಿತು. ಕಂದಾಯ ಸಚಿವ ಆರ್.ಅಶೋಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ಕುಮಾರ್ ನೇತೃತ್ವದಲ್ಲಿ ಸರ್ಕಾರದ ಪ್ರತಿನಿಧಿಗಳು ಸದಾಶಿವ ನಗರದಲ್ಲಿರುವ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ, ಅಶ್ವಿನಿ ಪುನೀತ್ ರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಮಂಗಳವಾರ ಸಂಜೆ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಸರ್ಕಾರ ನೀಡಲಿದೆ. ಪುನೀತ್ ಅಭಿಮಾನಿಗಳು, ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
____
Be the first to comment