ಕಾಂತಾರ ಗಳಿಕೆಯಲ್ಲಿ ದಾಖಲೆ

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಸಿನಿಮಾ 300 ಕೋಟಿ ರೂಪಾಯಿ ಗಳಿಕೆ ಮಾಡುವ ಮೂಲಕ ಬಾಕ್ಸಾಫೀಸ್ ನಲ್ಲಿ ದಾಖಲೆ ಬರೆದಿದೆ.

ಅತಿ ಹೆಚ್ಚು ಕಲೆಕ್ಷನ್ ಮಾಡಿದ ಕನ್ನಡದ ಎರಡನೇ ಸಿನಿಮಾ ಇದಾಗಿದೆ. ಕಾಂತಾರ ಭಾರತದೆಲ್ಲೆಡೆ ಭರ್ಜರಿ ಸೌಂಡ್ ಮಾಡುತ್ತಿದ್ದು, ಒಂದರ ಮೇಲೊಂದು ದಾಖಲೆ ಬರೆಯುತ್ತಿದೆ.

ಈಗಾಗಲೇ ಕಲೆಕ್ಷನ್ ನಲ್ಲಿ ಕೆಜಿಎಫ್ ಮೊದಲನೆಯ ಭಾಗವನ್ನು ಹಿಂದಿಕ್ಕಿದ್ದು, ಕಾಂತಾರ ಚಿತ್ರ ಇನ್ನೂ ಸದ್ದು ಮಾಡುತ್ತಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಸಾಕಷ್ಟು ಸಿನಿಮಾ ಕಲಾವಿದರು ಈ ಚಿತ್ರಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಚಿತ್ರ ಎಲ್ಲಾ ಭಾಷೆಯ ಸಿನಿ ಪ್ರೇಕ್ಷಕರ ಗಮನ ಸೆಳೆದಿದೆ.

ಹೊಂಬಾಳೆ ಫಿಲಂಸ್ ಬ್ಯಾನರ್ ನಡಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿರುವ ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಸಪ್ತಮಿ ಗೌಡ, ಕಿಶೋರ್, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್, ಮಾನಸಿ ಸುಧೀರ್, ಪ್ರಕಾಶ್, ಸ್ವರಾಜ್ ಶೆಟ್ಟಿ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ. ಅಜನೀಶ್ ಲೋಕನಾಥ್ ಅವರ ಸಂಗೀತ ಈ ಚಿತ್ರಕ್ಕಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!