ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಕೊನೆಯ ಚಿತ್ರ ಗಂಧದಗುಡಿ ಟಿಕೆಟ್ ದರವನ್ನು ನಾಲ್ಕು ದಿನಗಳ ಕಾಲ ಕಡಿತ ಮಾಡಲಾಗಿದೆ.
ಈ ವಿಷಯವನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ಪ್ರಕಟಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಈ ಬಗ್ಗೆ ಮಾಹಿತಿ ನೀಡಿದ್ದು, ನವೆಂಬರ್ 7ರಿಂದ 10ರವರೆಗೆ ರಾಜ್ಯಾದ್ಯಂತ ಸಿಂಗಲ್ ಸ್ಕ್ರೀನ್ ಥಿಯೇಟರ್ಗಳಲ್ಲಿ ‘ಗಂಧದಗುಡಿ’ ಚಿತ್ರದ ಹೊಸ ಟಿಕೆಟ್ ದರ 56 ರೂ., ಮಲ್ಟಿಪ್ಲೆಕ್ಸ್ಗಳಲ್ಲಿ 112 ರೂ.ಗೆ ಎಲ್ಲ ಪ್ರದರ್ಶನಗಳು ಇರಲಿವೆ ಎಂದು ಹೇಳಿದ್ದಾರೆ.
ಗಂಧದಗುಡಿ ಅಪ್ಪು ಅವರ ಕನಸು. ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಹಂಬಲ ಈ ಸಿನಿಮಾ ರೂಪುಗೊಳ್ಳಲು ಕಾರಣ. ಅಪ್ಪು ಅವರ ಉದ್ದೇಶ ಈ ಸಿನಿಮಾ ಎಲ್ಲ ಕನ್ನಡಿಗರು ನೋಡಬೇಕೆಂಬುದು. ಅದರಲ್ಲೂ ಮಕ್ಕಳು ಈ ಚಿತ್ರ ವೀಕ್ಷಣೆ ಮಾಡಬೇಕೆಂಬುದು.. ಈ ಸಲುವಾಗಿ ನಾನು ಮತ್ತು ಚಿತ್ರ ತಂಡದ ಎಲ್ಲರೊಡನೆ ಚರ್ಚಿಸಿ, ವಿತರಕರು ಹಾಗೂ ಪ್ರದರ್ಶಕರ ಸಹಕಾರದೊಂದಿಗೆ ನಮ್ಮ ಗಂಧದಗುಡಿಯನ್ನು ಸೋಮವಾರದಿಂದ ಗುರುವಾರದವರೆಗೆ ಸಿಂಗಲ್ ಸ್ಕ್ರೀನ್ ಥಿಯೇಟರ್ಗಳಲ್ಲಿ 56 ರೂ. ಹಾಗೂ ಮಲ್ಟಿಪ್ಲೆಕ್ಸ್ಗಳಲ್ಲಿ 112 ರೂ.ಗೆ ದಿನದ ಎಲ್ಲ ಪ್ರದರ್ಶನ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ ಎಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ ತಿಳಿಸಿದ್ದಾರೆ.
ನಮ್ಮ ಮಕ್ಕಳ ನಾಳೆಗಳಿಗಾಗಿ ಕಾಡನ್ನು ಸಂರಕ್ಷಿಸೋಣ. ಗಂಧದಗುಡಿಯನ್ನು ತೋರಿಸೋಣ ಎಂಬ ಸಂದೇಶವನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಟ್ವಿಟರ್ ಮತ್ತು ಫೇಸ್ಬುಕ್ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.
____

Be the first to comment