ಕರ್ನಾಟಕ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಕನ್ನಡ ಚಿತ್ರರಂಗದ ಸಿನಿಮಾಟೋಗ್ರಾಫರ್ ಅಶೋಕ್ ಕಶ್ಯಪ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ನಂದಿನಿ ಬಡಾವಣೆಯಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿ ಕಚೇರಿಯಲ್ಲಿ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಹಿಂದಿನ ಅಧ್ಯಕ್ಷರ ಸುನೀಲ್ ಪುರಾಣಿಕ್ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ರಾಜ್ಯ ಸರ್ಕಾರ ನ.5ರಂದು ಅಶೋಕ್ ಕಶ್ಯಪ್ ಅವರನ್ನು ನೇಮಿಸಿ ಆದೇಶ ಹೊರಡಿಸಿತ್ತು.
ಅಶೋಕ್ ಕಶ್ಯಪ್ ಅವರು, ಕನ್ನಡ ಚಿತ್ರರಂಗದ ತಾಂತ್ರಿಕ ವರ್ಗದಲ್ಲಿ ದುಡಿದ ತಮ್ಮನ್ನು ಸರ್ಕಾರ ಗುರುತಿಸಿ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಿಸಿರುವುದು ಸಿನಿಮಾದ ತಾಂತ್ರಿಕ ವರ್ಗಕ್ಕೆ ಖುಷಿ ತಂದಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಕನ್ನಡ ಚಿತ್ರರಂಗದಲ್ಲಿ ಈವರೆಗಿನ ತಮ್ಮ ಅನುಭವವನ್ನು ಅಕಾಡೆಮಿ ಹಾಗೂ ಕನ್ನಡ ಚಿತ್ರರಂಗದ ಬೆಳವಣಿಗೆಗೆ ಪೂರಕವಾಗಿ ಶ್ರಮಿಸುವುದಾಗಿ ತಿಳಿಸಿದರು.
ಅಕಾಡೆಮಿಯ ಹಿಂದಿನ ಅಧ್ಯಕ್ಷ ಟಿ.ಎಸ್.ನಾಗಾಭರಣ, ನಾಗತಿಹಳ್ಳಿ ಚಂದ್ರಶೇಖರ್, ಹಿರಿಯ ಸಿನಿಮಾಟೋಗ್ರಾಫರ್ ಬಸವರಾಜ್ ಸೇರಿದಂತೆ ಹಲವು ಗಣ್ಯರು, ಚಿತ್ರ ನಿರ್ದೇಶಕರು, ಅಭಿಮಾನಿಗಳು ಈ ವೇಳೆ ಶುಭ ಕೋರಿದರು.
ಅಶೋಕ್ ಅಶ್ಯಪ್ ಅವರು ಕನ್ನಡ ಚಿತ್ರರಂಗದಲ್ಲಿ ಹಿರಿಯ ಸಿನಿಮಾಟೋಗ್ರಾಫರ್ ಆಗಿದ್ದು ಶಾಪ ಚಿತ್ರದ ಛಾಯಾಗ್ರಾಹಣಕ್ಕೆ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ. ಭುವನಜ್ಯೋತಿ, ಶ್, ಸೂಪರ್, ಉಪ್ಪಿ-2 ಸೇರಿದಂತೆ ಹಲವು ಚಿತ್ರಗಳಿಗೆ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿದ್ದಾರೆ.
__
Be the first to comment