ಸೂಪರ್ ಸ್ಟಾರ್ ಕೃಷ್ಣ ನಿಧನ

ತೆಲುಗು ಚಿತ್ರರಂಗದ ಖ್ಯಾತ ನಟ ಮಹೇಶ್​ ಬಾಬು ಅವರ ತಂದೆ ‘ಸೂಪರ್​ ಸ್ಟಾರ್​’ ಕೃಷ್ಣ ಅವರು ನ.15ರ ನಸುಕಿನ 4 ಗಂಟೆ ಸುಮಾರಿಗೆ ನಿಧನರಾದರು.

ಕೃಷ್ಣ ಅವರ ಜೊತೆ 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಮಹೇಶ್​ ಬಾಬು ಅವರು ಬಾಲನಟನಾಗಿ ಅಭಿನಯಿಸಿದ್ದರು. ಸೆಪ್ಟೆಂಬರ್​ 28ರಂದು ಮಹೇಶ್​ ಬಾಬು ಅವರ ತಾಯಿ ಇಂದಿರಾ ದೇವಿ ನಿಧನರಾಗಿದ್ದರು.

ಒಂದೂವರೆ ತಿಂಗಳ ಹಿಂದೆ ತಾಯಿ ಇಂದಿರಾ ದೇವಿ ಅವರ ನಿಧನದ ನೋವು ಮಾಸುವ ಮುನ್ನ ತಂದೆ ಕೂಡ ಕೊನೆಯುಸಿರು ಎಳೆದಿರುವುದು ಮಹೇಶ್​ ಬಾಬು ಪಾಲಿನ ದುಃಖವನ್ನು ದುಪ್ಪಟ್ಟುಗೊಳಿಸಿದೆ.

ತೆಲುಗು ಚಿತ್ರರಂಗದಲ್ಲಿ ಕೃಷ್ಣ ಅವರು ಸೂಪರ್​ ಸ್ಟಾರ್​ ಆಗಿದ್ದರು. 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅವರು ಜನಪ್ರಿಯತೆ ಪಡೆದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಪ್ರಾರ್ಥಿಸಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!