ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಅಬ್ಬರ ಸಿನಿಮಾ ನಾಳೆ ರಾಜ್ಯಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.
ಕೆ ರಾಮ್ ನಾರಾಯಣ್ ನಿರ್ದೇಶನದ ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕವೇ ಸಾಕಷ್ಟು ಸದ್ದು ಮಾಡಿದೆ. ಚಿತ್ರವನ್ನು ವೀಕ್ಷಿಸಲು ಸಿನಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.
ಆಕ್ಷನ್ ಥ್ರಿಲ್ಲರ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಪ್ರಜ್ವಲ್ ಸೇರಿದಂತೆ ನಿಮಿಕಾ ರತ್ನಾಕರ್, ರಾಜಶ್ರೀ ಪೊನ್ನಪ್ಪ, ರವಿಶಂಕರ್, ಲೇಖ ಚಂದ್ರ ಸೇರಿದಂತೆ ಮೊದಲಾದ ಕಲಾವಿದರು ಅಭಿನಯಿಸಿದ್ದಾರೆ.
ಚಿತ್ರವನ್ನು ಸಿ&ಎಮ್ ಮೂವೀಸ್ ಬ್ಯಾನರ್ ನಡಿ ಬಸವರಾಜ್ ಮಂಚಯ್ಯ ನಿರ್ಮಾಣ ಮಾಡಿದ್ದಾರೆ. ರವಿ ಬಸ್ರೂರ್ ಅವರ ಸಂಗೀತ ಈ ಚಿತ್ರಕ್ಕಿದೆ.
ಪ್ರೇಕ್ಷಕರು ಚಿತ್ರಕ್ಕೆ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎನ್ನುವುದು ನಾಳೆ ಗೊತ್ತಾಗಲಿದೆ.
___





Be the first to comment