ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ತ್ರಿಬಲ್ ರೈಡಿಂಗ್’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ನಿರೀಕ್ಷೆ ಹುಟ್ಟಿಸಿದೆ.
ಲವ್, ಕಾಮಿಡಿ, ಎಮೋಷನ್ ಇಲ್ಲಿದೆ. ‘ಗಾಳಿಪಟ – 2’ ನಂತರ ಗಣೇಶ್ ಮತ್ತೊಂದು ಸಕ್ಸಸ್ ನ ನಿರೀಕ್ಷೆಯಲ್ಲಿದ್ದಾರೆ.
ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ಗೆ ನಾಯಕಿಯರಾಗಿ ಅದಿತಿ ಪ್ರಭುದೇವ, ಮೇಘಾ ಶೆಟ್ಟಿ, ರಚನಾ ಇಂದರ್ ಮಿಂಚಿದ್ದಾರೆ. ಸಾಧು ಕೋಕಿಲ, ರವಿಶಂಕರ್, ಶರತ್ ಲೋಹಿತಾಶ್ವ, ರಂಗಾಯಣ ರಘು, ಅಚ್ಚುತ್ ಕುಮಾರ್, ಶೋಭರಾಜ್, ಕುರಿ ಪ್ರತಾಪ್ ಸೇರಿದಂತೆ ದೊಡ್ಡ ಕಲಾವಿದರ ಬಳಗ ಸಿನಿಮಾದಲ್ಲಿದೆ.
ರಾಮ್ ಗೋಪಾಲ್ ವೈ ಎಂ ‘ತ್ರಿಬಲ್ ರೈಡಿಂಗ್’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಮಹೇಶ್ ಗೌಡ ಚಿತ್ರ ನಿರ್ದೇಶನ ಮಾಡಿದ್ದಾರೆ.
ಮುಂದಿನ ವಾರ ರಾಜ್ಯಾದ್ಯಂತ ‘ತ್ರಿಬಲ್ ರೈಡಿಂಗ್’ ಸಿನಿಮಾ ತೆರೆಗೆ ಬರಲಿದೆ. ಚಿತ್ರಕ್ಕೆ ಪ್ರೇಕ್ಷಕರ ಪ್ರತಿಕ್ರಿಯೆ ಹೇಗೆ ಸಿಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
__

Be the first to comment