ರಿಷಬ್ ಶೆಟ್ಟಿ ನಿರ್ದೇಶಿಸಿರುವ ಕಾಂತಾರ ಚಿತ್ರ, ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ ದಿ ರೈಸ್’ ಸಿನಿಮಾವನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿದೆ.
ಕಳೆದ ವರ್ಷ ಡಿಸೆಂಬರ್ ನಲ್ಲಿ ಬಿಡುಗಡೆಯಾಗಿದ್ದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ ದಿ ರೈಸ’ ಬಾಕ್ಸ್ ಆಫೀಸ್ ನಲ್ಲಿ 365 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು.
‘ಕಾಂತಾರ’ ಸಿನಿಮಾ ಸುಮಾರು 375 ಕೋಟಿ ಗಳಿಕೆ ಮಾಡಿದ್ದು 400ರ ಸಮೀಪದಲ್ಲಿದೆ. ಸೆಪ್ಟಂಬರ್ 30ಕ್ಕೆ ಬಿಡುಗಡೆಯಾದ ಈ ಚಿತ್ರ ಈಗಲೂ ಕರ್ನಾಟಕ ಸೇರಿದಂತೆ ಹಲವು ಭಾಷೆಗಳಲ್ಲಿ ಪ್ರದರ್ಶನ ಕಾಣುತ್ತಿದೆ.
ಹೊಂಬಾಳೆ ಫಿಲ್ಮ್ ಬ್ಯಾನರ್ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದ ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಸಪ್ತಮಿ ಗೌಡ, ಕಿಶೋರ್, ಅಚ್ಚುತ್ ಕುಮಾರ್, ನವೀನ್ ಡಿ ಪಾಟೀಲ್, ಪ್ರಮೋದ್ ಶೆಟ್ಟಿ, ಮಾನಸಿ ಸುಧೀರ್, ದೀಪಕ್ ರೈ ಪಣಜೆ, ರಾಜೀವ್ ಶೆಟ್ಟಿ ಅಭಿನಯಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ.
___

Be the first to comment