ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡ ಸಿನಿಮಾ ಇಂಡಸ್ಟ್ರಿಯಿಂದ ನಿಷೇಧ ಎದುರಿಸಬಹುದು ಎನ್ನುವ ಸುದ್ದಿ ಹರಿದಾಡುತ್ತಿದೆ.
ಮೊದಲ ಅವಕಾಶ ನೀಡಿದ ನಟ-ನಿರ್ಮಾಪಕ ರಕ್ಷಿತ್ ಶೆಟ್ಟಿ ಒಡೆತನದ ನಿರ್ಮಾಣ ಸಂಸ್ಥೆಗೆ ಕೃತಜ್ಞತೆಯಿಲ್ಲದೆ ಕಾಮೆಂಟ್ ಮಾಡಿದ ಕಾರಣಕ್ಕಾಗಿ ರಶ್ಮಿಕಾ ಮಂದಣ್ಣ ವಿರುದ್ಧ ಬಾಯ್ಕಾಟ್ ಮಾತುಗಳು ಕೇಳಿ ಬರುತ್ತಿವೆ.
ಕರ್ಲಿ ಟೇಲ್ಸ್ ಶೋನಲ್ಲಿ ಭಾಗವಹಿಸಿದ ರಶ್ಮಿಕಾ ಅಲ್ಲಿ ಕೊಟ್ಟ ಹೇಳಿಕೆಯಿಂದ ಟೀಕೆಗೆ ಒಳಗಾಗಿದ್ದಾರೆ. ಮೊದಲ ಚಿತ್ರ ಕಿರಿಕ್ ಪಾರ್ಟಿ ನಿರ್ಮಿಸಿದ ರಕ್ಷಿತ್ ಶೆಟ್ಟಿ ಪ್ರೊಡಕ್ಷನ್ ಹೌಸ್ ಹೆಸರಿಗೆ ವ್ಯಂಗ್ಯ ಮಾಡಿದ್ದು ನೆಟ್ಟಿಗರನ್ನು ಕೆರಳಿಸಿದೆ. ಕನ್ನಡಿಗರು ಇದನ್ನು ವ್ಯಾಪಕವಾಗಿ ಶೇರ್ ಮಾಡುತ್ತಿದ್ದು ರಶ್ಮಿಕಾರನ್ನು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಿದ್ದಾರೆ.
ಕರ್ಲಿ ಟೇಲ್ಸ್ ಸಂದರ್ಶನದ ನಂತರ ರಶ್ಮಿಕಾ ಮಂದಣ್ಣ ಅವರ ವರ್ತನೆಯಿಂದ ಕನ್ನಡ ಥಿಯೇಟರ್ ಮಾಲೀಕರು, ಸಂಘಟನೆಗಳು ಮತ್ತು ಚಿತ್ರರಂಗ ಅಸಮಾಧಾನಗೊಂಡಿದೆ ಎನ್ನುವ ಮಾತುಗಳು ಕೇಳಿ ಬಂದಿದೆ.
ರಶ್ಮಿಕಾ ಮುಂದಿನ ಚಿತ್ರಗಳಾದ ಪುಷ್ಪ 2 ಮತ್ತು ವಾರಿಸುವನ್ನು ಕರ್ನಾಟಕದ ಥಿಯೇಟರ್ಗಳಿಂದ ತೆಗೆದುಹಾಕುವ ಮೂಲಕ ನಟಿಯ ವಿರುದ್ಧ ಕ್ರಮ ಕೈಗೊಳ್ಳಲು ಯೋಚಿಸಲಾಗುತ್ತಿದೆ ಎಂಬ ಚರ್ಚೆ ಶುರುವಾಗಿದೆ.
ರಶ್ಮಿಕಾ ಈಗ ಅಲ್ಲು ಅರ್ಜುನ್ ಜೊತೆ ಪುಷ್ಪ: ದಿ ರೂಲ್ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ, ಇದರಲ್ಲಿ ಫಹದ್ ಫಾಸಿಲ್ ಕೂಡ ನಟಿಸಿದ್ದಾರೆ.
___

Be the first to comment