ಡಿಸೆಂಬರ್ ನಲ್ಲಿ ಸೆಟ್ಟೇರಲಿದೆ ‘ಟಗರು ಪಲ್ಯ’

ಡಿಸೆಂಬರ್ ನಲ್ಲಿ ಡಾಲಿ ಧನಂಜಯ್ ನಿರ್ಮಾಣದ ‘ಟಗರು ಪಲ್ಯ’ ಚಿತ್ರ ಸೆಟ್ಟೇರಲಿದೆ.

‘ಟಗರು ಪಲ್ಯ’ ಮೂಲಕ ಹೊಸ ಪ್ರತಿಭೆಗಳಿಗೆ ಡಾಲಿ ಪಿಕ್ಚರ್ಸ್ ವೇದಿಕೆ ಮಾಡಿಕೊಟ್ಟಿದೆ. ಚಿತ್ರದಲ್ಲಿ ನಾಗಭೂಷಣ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೂಲಕ ಉಮೇಶ್ ಕೆ ಕೃಪ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಯೋಗರಾಜ್ ಭಟ್ ಸೇರಿದಂತೆ ಹಲವು ನಿರ್ದೇಶಕರ ಜೊತೆ ಕೆಲಸ ಮಾಡಿರುವ ಉಮೇಶ್ ನಿರ್ದೇಶನದ ಮೂಲಕ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

‘ಟಗರು ಪಲ್ಯ’ ಕಂಟೆಂಟ್ ಆಧಾರಿತ ಸಿನಿಮಾವಾಗಿದ್ದು, ಒಂದೊಳ್ಳೆ ಮನರಂಜನೆಯನ್ನು ಪ್ರೇಕ್ಷಕರಿಗೆ ನೀಡಲಿದೆ. ಸಿನಿಮಾ ಸ್ಕ್ರಿಪ್ಟ್ ಕೆಲಸಗಳು ಮುಗಿದಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ಸಿನಿಮಾ ಸೆಟ್ಟೇರಲಿದೆ ಎಂದು ನಿರ್ದೇಶಕ ಉಮೇಶ್ ಕೆ ಕೃಪ ತಿಳಿಸಿದ್ದಾರೆ.

ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ಮೂಲಕ ಸಿನಿಮಾ ನಿರ್ಮಾಣವನ್ನು ಮಾಡುತ್ತಿದ್ದು ಮೊದಲೆರಡು ಸಿನಿಮಾವಾಗಿ ‘ಬಡವ ರಾಸ್ಕಲ್’ ಹಾಗೂ ‘ಹೆಡ್ ಬುಶ್’ ನಿರ್ಮಾಣ ಮಾಡಲಾಗಿತ್ತು. ಇತ್ತೀಚೆಗೆ ಡಾಲಿ ಪಿಕ್ಚರ್ಸ್ ನ ಮೂರನೇ ಸಿನಿಮಾ ‘ಟಗರು ಪಲ್ಯ’ ಅನೌನ್ಸ್ ಆಗಿತ್ತು.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!