ಟೆಂಪರ್ ಟ್ರೈಲರ್ ರಿಲೀಸ್

ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗಿ, ಬಿಡುಗಡೆಗೆ ಸಿದ್ದವಾಗಿರುವ ಟೆಂಪರ್ ಚಿತ್ರದ ಟ್ರೈಲರ್ ಬಿಡುಗಡೆ ಆಗಿದೆ

ಕಳೆದ ಸೋಮವಾರ ಚಲನಚಿತ್ರ ಕಲಾವಿದರ ಸಂಘದಲ್ಲಿ ಟ್ರೈಲರ್ ಅನಾವರಣಗೊಳಿಸಲಾಯಿತು.

ಈ ಮೂಲಕ ಕನ್ನಡ ಚಿತ್ರರಂಗದಲ್ಲಿ ಏಳೆಂಟು ವರ್ಷಗಳಿಂದ ಸಾಹಿತಿ, ಸಂಗೀತ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿರುವ ಮಂಜುಕವಿ ಈಗ ನಿರ್ದೇಶಕನಾಗಿ ಭಡ್ತಿ ಪಡೆದಿದ್ದಾರೆ.

ಮಕ್ಕಳನ್ನು ಚಿಕ್ಕವರಿದ್ದಾಗಲೇ ಸುಸಂಸ್ಕೃತರನ್ನಾಗಿ ಬೆಳೆಸದೆ ಹೋದರೆ ಮುಂದೆ ಅವರು ಹೇಗೆ ಸಮಾಜಕ್ಕೆ ಹೊರೆಯಾಗುತ್ತಾರೆ ಎನ್ನುವುದು ಚಿತ್ರದ ಒನ್‌ಲೈನ್ ಸ್ಟೋರಿ. ಮಕ್ಕಳ ಜೊತೆ ತಂದೆ-ತಾಯಿಯ ಬಾಂಧವ್ಯ ಹಾಗೂ ಸ್ನೇಹದ ಕುರಿತಾಗಿ ಉತ್ತಮ ಸಂದೇಶ ಕೂಡ ಚಿತ್ರದಲ್ಲಿದೆ.

ನಿರ್ದೇಶಕ ಮಂಜುಕವಿ ಮಾತನಾಡಿ, ಕುಟುಂಬಸಮೇತ ನೋಡಬಹುದಾದ ಫ್ಯಾಮಿಲಿ ಎಂಟರ್ ಟೈನರ್ ಚಿತ್ರ ಇದಾಗಿದೆ. ನನ್ನ ಜೊತೆ ಕೆಲಸ ಮಾಡಿದ ನಿರ್ದೇಶಕ ತಂಡದ ಸಹಕಾರದಿಂದಲೇ ಚಿತ್ರ ಇಷ್ಟು ಅದ್ಭುತವಾಗಿ ಮೂಡಿಬಂದಿದೆ, ಮಾಸ್ ಸ್ಟೋರಿ ಜೊತೆಗೊಂದು ಪ್ರೇಮಕಥೆಯೂ ಇದೆ. ಬೆಂಗಳೂರು, ಮಂಡ್ಯ, ಮೈಸೂರು, ನಂಜನಗೂಡು, ಶ್ರೀರಂಗಪಟ್ಟಣ, ಚಿಕ್ಕಮಗಳೂರು, ಕುಂದಾಪುರ ಸುತ್ತಮುತ್ತ ೫೦ ದಿನಗಳ ಕಾಲ ಚಿತ್ರದ ಚಿತ್ರೀಕರಣ ನಡೆಸಲಾಗಿದೆ ಎಂದರು.

ಚಿತ್ರದ ಕಥೆ, ಚಿತ್ರಕಥೆ ಹಾಗೂ ಹಾಡುಗಳನ್ನು ನಾನೇ ಬರೆದಿದ್ದೇನೆ. ಕಷ್ಟಪಟ್ಟು ಸಿನಿಮಾ ಮಾಡಿದ್ದೇವೆ. ಎಲ್ಲರೂ ಥೇಟರಿಗೆ ಬಂದು ಸಿನಿಮಾ ನೋಡಿ ಎಂದು ಪ್ರೇಕ್ಷಕರಿಗೆ ಮನವಿ ಮಾಡಿದರು.

ಈ ಚಿತ್ರದ ಮೂಲಕ ಆರ್ಯನ್ ಸೂರ್ಯ ಹಾಗೂ ಕಾಶಿಮಾ ರಫಿ ಮೊದಲ ಬಾರಿಗೆ ನಾಯಕ, ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ತಬಲಾನಾಣಿ, ಸುಧಾ ಬೆಳವಾಡಿ ನಾಯಕನ ತಂದೆ, ತಾಯಿಯಾಗಿ ನಟಿಸಿದ್ದಾರೆ. ನಾಯಕನ ಬಾಲ್ಯದ ಪಾತ್ರವನ್ನು ಮಾಸ್ಟರ್ ಪವನ್ ಮೋರೆ ಮಾಡಿದ್ದಾರೆ. ಆರ್.ಹರಿಬಾಬು ಸಂಗೀತ ಸಂಯೋಜನೆ ಮಾಡಿದ್ದಾರೆ. ಆರ್.ಕೆ.ಶಿವಕುಮಾರ್ ಅವರ ಕ್ಯಾಮರಾವರ್ಕ್ ಚಿತ್ರಕ್ಕಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!