‘ಟಗರು ಪಲ್ಯ’ ಮುಹೂರ್ತ

‘ಟಗರು ಪಲ್ಯ’ ಸಿನಿಮಾ ಮುಹೂರ್ತ ನಡೆದಿದ್ದು, ಡಿಸೆಂಬರ್ ಮೊದಲ ವಾರದಿಂದ ಚಿತ್ರೀಕರಣ ಆರಂಭಿಸಲಿದೆ.

ಡಾಲಿ ಧನಂಜಯ್ ನಿರ್ಮಾಣ ಸಂಸ್ಥೆ ಡಾಲಿ ಪಿಕ್ಚರ್ಸ್ ನಡಿ ನಿರ್ಮಾಣವಾಗುತ್ತಿರುವ ಮೂರನೇ ಸಿನಿಮಾ ಟಗರು ಪಲ್ಯ. ‘ಇಕ್ಕಟ್’ ಖ್ಯಾತಿಯ ನಾಗಭೂಷಣ್, ನೆನಪಿರಲಿ ಪ್ರೇಮ್ ಪುತ್ರಿ ಅಮೃತ ಪ್ರೇಮ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಚಿತ್ರವನ್ನು ಉಮೇಶ್. ಕೆ. ಕೃಪ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ.

ಇದು ಕಟೆಂಟ್ ಆಧಾರಿತ ಸಿನಿಮಾವಾಗಿದ್ದು, ಒಂದೊಳ್ಳೆ ಮನರಂಜನೆಯನ್ನು ಪ್ರೇಕ್ಷಕರಿಗೆ ನೀಡಲಿದೆ. ಸಿನಿಮಾ ಸ್ಕ್ರಿಪ್ಟ್ ಕೆಲಸಗಳು ಮುಗಿದಿದ್ದು, ಡಿಸೆಂಬರ್ ಮೊದಲ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರದ ಮೂಲಕ ಲವ್ ಲಿ ಸ್ಟಾರ್ ಪ್ರೇಮ್
ಪುತ್ರಿ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ ಎಂದು ನಿರ್ದೇಶಕ ಉಮೇಶ್ ಕೆ ಕೃಪ ತಿಳಿಸಿದ್ದಾರೆ.

ಡಾಲಿ ಧನಂಜಯ್, ಉಮೇಶ್ ಕೆ ಕೃಪ ‘ಟಗರು ಪಲ್ಯ’ ಕಥೆ ಎಳೆ ಹೇಳಿದಾಗ ತುಂಬಾ ಖುಷಿ ಆಯ್ತು. ಅದ್ಭುತವಾದ ರೈಟರ್. ಸೆಟ್ ಹುಡುಗ ಆಗಿ ಕೆಲಸ ಆರಂಭಿಸಿ, ಈಗ ನಿರ್ದೇಶಕನಾಗುತ್ತಿದ್ದಾರೆ. ನಮ್ಮ ಬ್ಯಾನರ್ ನಿಂದ ಒಳ್ಳೆಯ ನಿರ್ದೇಶಕರು ಬರಲಿ ಎಂದು ಈ ಸಿನಿಮಾ ಆರಂಭಿಸಿದ್ದೇವೆ ಎಂದಿದ್ದಾರೆ.

ಸಿನಿಮಾ ಕಥೆ ಮಂಡ್ಯದ ಹಳ್ಳಿಯಲ್ಲಿ ನಡೆಯುವ ಆಚರಣೆಯ ಕಥಾಹಂದರ ಒಳಗೊಂಡಿದೆ. ಎಮೋಶನಲ್ ಎಂಟಟೈನ್ಮೆಂಟ್ ಸಿನಿಮಾ ಇದಾಗಿದೆ ಎಂದು ಚಿತ್ರತಂಡ ತಿಳಿಸಿದೆ.

ಟಗರು ಪಲ್ಯಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ, ಎಸ್. ಕೆ. ರಾವ್ ಕ್ಯಾಮೆರಾ ವರ್ಕ್, ವಿನೋದ್ ಮಾಸ್ಟರ್ ಸಾಹಸ ನಿರ್ದೇಶನವಿದೆ.

ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಒಳಗೊಂಡ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!