ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗಿ, ಬಿಡುಗಡೆಗೆ ಸಿದ್ದವಾಗಿರುವ ಟೆಂಪರ್ ಚಿತ್ರದ ಹಾಡು ಬಿಡುಗಡೆ ಆಗಿದೆ.
ಗೂಗಲ್ ನಲ್ಲಿ ಹಾಡನ್ನು ಶರಣ್, ಶ್ವೇತಾ ಪ್ರಭು ಹಾಡಿದ್ದು ಸದ್ದು ಮಾಡುತ್ತಿದೆ.
ಕನ್ನಡ ಚಿತ್ರರಂಗದಲ್ಲಿ ಏಳೆಂಟು ವರ್ಷಗಳಿಂದ ಸಾಹಿತಿ, ಸಂಗೀತ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿರುವ ಮಂಜುಕವಿ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಭಡ್ತಿ ಪಡೆದಿದ್ದಾರೆ.
ಮಕ್ಕಳನ್ನು ಚಿಕ್ಕವರಿದ್ದಾಗಲೇ ಸುಸಂಸ್ಕೃತರನ್ನಾಗಿ ಬೆಳೆಸದೆ ಹೋದರೆ ಮುಂದೆ ಅವರು ಹೇಗೆ ಸಮಾಜಕ್ಕೆ ಹೊರೆಯಾಗುತ್ತಾರೆ ಎನ್ನುವುದು ಚಿತ್ರದ ಒನ್‌ಲೈನ್ ಸ್ಟೋರಿ ಆಗಿದೆ. ಮಕ್ಕಳ ಜೊತೆ ತಂದೆ-ತಾಯಿಯ ಬಾಂಧವ್ಯ ಹಾಗೂ ಸ್ನೇಹದ ಕುರಿತಾದ ಸಂದೇಶ ಚಿತ್ರದಲ್ಲಿದೆ.
ಬೆಂಗಳೂರು, ಮಂಡ್ಯ, ಮೈಸೂರು, ನಂಜನಗೂಡು, ಶ್ರೀರಂಗಪಟ್ಟಣ, ಚಿಕ್ಕಮಗಳೂರು, ಕುಂದಾಪುರ ಸುತ್ತಮುತ್ತ ೫೦ ದಿನಗಳ ಕಾಲ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಕಥೆ, ಚಿತ್ರಕಥೆ ಹಾಗೂ ಹಾಡುಗಳನ್ನು ನಿರ್ದೇಶಕರೇ ಬರೆದಿದ್ದಾರೆ.
ಈ ಚಿತ್ರದ ಮೂಲಕ ಆರ್ಯನ್ ಸೂರ್ಯ ಹಾಗೂ ಕಾಶಿಮಾ ರಫಿ ಮೊದಲ ಬಾರಿಗೆ ನಾಯಕ, ನಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ತಬಲಾನಾಣಿ, ಸುಧಾ ಬೆಳವಾಡಿ, ಮಾಸ್ಟರ್ ಪವನ್ ನಟಿಸಿದ್ದಾರೆ.
ಆರ್.ಹರಿಬಾಬು ಸಂಗೀತ ಸಂಯೋಜನೆ, ಆರ್.ಕೆ.ಶಿವಕುಮಾರ್ ಅವರ ಕ್ಯಾಮರಾವರ್ಕ್ ಚಿತ್ರಕ್ಕಿದೆ.
___
Be the first to comment