ಟೈಟಲ್ ವಿವಾದ ಅಂತ್ಯ

ಸ್ವಾತಿ ಮುತ್ತಿನ ಮಳೆ ಹನಿಯೇ ಟೈಟಲ್ ವಿವಾದ ಅಂತ್ಯ ಕಂಡಿದೆ.

ಮೂರು ದಿನಗಳ ಹಿಂದೆ ಕನ್ನಡ ಸಿನಿಮಾ ರಂಗದ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಟೈಟಲ್ ತಮ್ಮ ಬಳಿ ಇದೆ. ಅದನ್ನು ಯಾರೂ ಬಳಸಬಾರದು ಎಂದು ತಮ್ಮ ವಕೀಲರ ಮೂಲಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ಕಳುಹಿಸಿದ್ದರು.

ಹೊಸ ಸುದ್ದಿಯೊಂದು ಹೊರಬಿದ್ದಿದ್ದು, ಸ್ವಾತಿ ಮುತ್ತಿನ ಮಳೆ ಹನಿಯೇ ಟೈಟಲ್ ರಾಜೇಂದ್ರ ಸಿಂಗ್ ಬಾಬು ಅವರ ಬಳಿಯೇ ಇಲ್ಲವೆಂದು ಗೊತ್ತಾಗಿದೆ. ಸ್ವಾತಿ ಮುತ್ತಿನ ಮಳೆ ಹನಿಯೇ ಟೈಟಲ್ ನಿರ್ಮಾಪಕ ಬಿ.ಕೆ. ಗಂಗಾಧರ್ ಬಳಿ ಇದೆ. ಈಗಾಗಲೇ ರಮ್ಯಾ ಅವರು ಗಂಗಾಧರ್ ಅವರಿಂದ ಪತ್ರದ ಮೂಲಕ ಟೈಟಲ್ ಅನ್ನು ತಮಗೆ ವರ್ಗಾಯಿಸಿಕೊಂಡಿದ್ದಾರೆ ಎನ್ನಲಾಗಿದೆ.

ರಮ್ಯಾ ಅವರು ಗಂಗಾಧರ ಅವರು ಕೊಟ್ಟ ಪತ್ರವನ್ನು ವಾಣಿಜ್ಯ ಮಂಡಳಿಗೆ ಸಲ್ಲಿಸಿದ್ದಾರೆ. ಟೈಟಲ್ ರಮ್ಯಾ ಅವರ ಪಾಲಾಗಲಿದೆ. ಹಾಗಾಗಿ ಈ ಶೀರ್ಷಿಕೆಗೂ ಮತ್ತು ರಾಜೇಂದ್ರ ಸಿಂಗ್ ಬಾಬು ಅವರಿಗೂ ಯಾವುದೇ ಸಂಬಂಧವಿಲ್ಲವೆಂದು ಸ್ವತಃ ವಾಣಿಜ್ಯ ಮಂಡಳಿಯೇ ತಿಳಿಸಿದೆ.

ರಾಜೇಂದ್ರ ಸಿಂಗ್ ಬಾಬು ವಾಣಿಜ್ಯ ಮಂಡಳಿಗೆ ಬರೆದ ಪತ್ರದಲ್ಲಿ ‘ನನ್ನ ಕಕ್ಷಿದಾರರು ನಿರ್ಮಿಸುವ ಸ್ವಾತಿ ಮುತ್ತಿನ ಮಳೆ ಹನಿಯೆ’ ಹೆಸರಿನ ಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದು. ಶೇಕಡಾ 80ರಷ್ಟು ಚಿತ್ರೀಕರಣ ಕೂಡ ಮುಗಿದಿದೆ. ಚಿತ್ರದ ನಾಯಕ ನಟ ಅಂಬರೀಶ್ ನಿಧನ ಹೊಂದಿ ನಂತರ ಚಿತ್ರದ ಚಿತ್ರೀಕರಣವು ಕಾರಣಾಂತರಗಳಿಂದ ನಿಂತಿದೆ. ನನ್ನ ಕಕ್ಷಿದಾರರು ಹೇಳುವ ಹಾಗೆ ಮೇಲ್ಕಂಡ ಚಿತ್ರ ಶೀರ್ಷಿಕೆ ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನ ಶೀರ್ಷಿಕೆಯಾಗಿರುತ್ತದೆ’ ಎಂದು ಸಿಂಗ್ ಬಾಬು ಪರ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದರು.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!