ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣ ಮಾಡುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ನಾಯಕ, ನಿರ್ದೇಶಕ ರಾಜ್ ಬಿ ಶೆಟ್ಟಿ ಅವರ ಲುಕ್ ಅನಾವರಣಗೊಂಡಿದೆ.
ಮೊನ್ನೆಯಷ್ಟೇ ಈ ಸಿನಿಮಾದ ನಾಯಕಿಯ ಪೋಸ್ಟರ್ ನ್ನು ಚಿತ್ರತಂಡ ರಿಲೀಸ್ ಮಾಡಿತ್ತು. ಇದೀಗ ನಾಯಕನ ಫೋಟೋವನ್ನು ಬಿಡುಗಡೆಗೊಳಿಸಲಾಗಿದೆ. ಇದೊಂದು ನಾಯಕಿ ಪ್ರಧಾನ ಸಿನಿಮಾವಾಗಿದ್ದು, ರಮ್ಯಾ ಮತ್ತು ರಾಜ್ ಬಿ ಶೆಟ್ಟಿ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.
ರಾಜ್ ಬಿ ಶೆಟ್ಟಿ ನಾಯಕನಾಗಿ ನಟಿಸುವುದರ ಜೊತೆಗೆ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದಾರೆ. ಈಗಾಗಲೇ ಸಂಪೂರ್ಣ ಚಿತ್ರೀಕರಣ ಮುಗಿಸಿದೆ. ರಮ್ಯಾ ಅವರ ಚೊಚ್ಚಲ ನಿರ್ಮಾಣದ ಸಿನಿಮಾ ಇದಾಗಿದ್ದು, ಹೆಚ್ಚಿನ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ.
ಸ್ವಾತಿ ಮುತ್ತಿನ ಮಳೆ ಹನಿ ಚಿತ್ರದಲ್ಲಿ ಬಾಲಾಜಿ ಮನೋಹರ್, ಸೂರ್ಯ ವಸಿಷ್ಟ, ರೇಖಾ ಕೂಡ್ಲಿಗಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಚಿತ್ರಕ್ಕೆ ಮಿಧುನ್ ಮುಕುಂದನ್ ಅವರ ಸಂಗೀತ, ಪ್ರವೀಣ್ ಶ್ರೀಯಾನ್ ಅವರ ಛಾಯಾಗ್ರಹಣವಿದೆ.
___

Be the first to comment