chandan shetty : ಚಂದನ್ ಶೆಟ್ಟಿಗೆ ಸಂಜನಾ ಆನಂದ್ ಹೀರೋಯಿನ್

ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಸೂತ್ರಧಾರಿ ಚಿತ್ರಕ್ಕೆ ನಾಯಕಿಯಾಗಿ ಸಲಗ ಖ್ಯಾತಿಯ ಸಂಜನಾ ಆನಂದ್ ಹೀರೋಯಿನ್ ಆಗಿ ಆಯ್ಕೆಯಾಗಿದ್ದಾರೆ.

ಹಾಡುಗಳ ಮೂಲಕ ಪಡ್ಡೆ ಹುಡುಗರ ಮತ್ತು ಹುಡುಗಿಯರ ಮನಗೆದ್ದ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸುತ್ತಿರುವ ಸಿನಿಮಾ ಇದಾಗಿದೆ. ನವರಸನ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಈಗಾಗಲೆ ಶೇಕಡಾ 90ರಷ್ಟು ಸಿನೆಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ಚಿತ್ರದ ಮೊದಲ ಹಾಡಿನ ಚಿತ್ರೀಕರಣ ಇನೋವೇಟೀವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿಯಾಗಿ ಸೆಟ್ಟೆರಿದೆ.

ಈ ಚಿತ್ರದ ಹೀರೋ ಇಂಟ್ರೊಡಕ್ಷನ್ ಸಾಂಗ್ ರಿಲೀಸ್ ಆಗಲಿದ್ದು, ಚಂದನ್ ಶೆಟ್ಟಿ ಸಂಗೀತ ನಿರ್ದೇಶಕ ಮತ್ತು ಗಾಯಕನಾಗಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ.

ಈ ಹಾಡನ್ನು ಡಿಸೆಂಬರ್ 27ರಂದು ಬೆಳಗ್ಗೆ 10.35ಕ್ಕೆ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

ಈ ಹಾಡು ಹೊಸ ವರ್ಷದ ಸಂಭ್ರಮಾಚರಣೆಗೆ ಹೇಳಿ ಮಾಡಿಸಿದ ಹಾಗಿದೆ ಎಂದಿದ್ದಾರೆ ನಿರ್ಮಾಪಕ ನವರಸನ್.

ಹಿರಿಯನಟ ತಬಲಾ ನಾಣಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!