Prabhudeva ವುಲ್ಫ್ ಶೂಟಿಂಗ್ ಮುಕ್ತಾಯ

ಪ್ರಭುದೇವ ಅಭಿನಯದ ಪ್ಯಾನ್​ ಇಂಡಿಯಾ ಚಿತ್ರ ವುಲ್ಫ್ ಶೂಟಿಂಗ್ ಮುಕ್ತಾಯ ಆಗಿದೆ.

ಹಿರಿಯ ನಿರ್ಮಾಪಕ ಸಂದೇಶ್ ನಾಗರಾಜ್ ಕೆಲವು ತಿಂಗಳುಗಳ ಹಿಂದೆ ಚಿತ್ರವನ್ನು ತಮ್ಮ ಸಂದೇಶ್​ ಪ್ರೊಡಕ್ಷನ್ಸ್​ ಮೂಲಕ ಶುರು ಮಾಡಿದ್ದರು.

ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ ಭಾರದ್ವಾಜ್​ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರವನ್ನು ಪಾಂಡಿಚೇರಿ, ಚೆನೈ, ಬೆಂಗಳೂರು, ಅಂಡಮಾನ್, ನಿಕೋಬಾರ್ ಮುಂತಾದ ಕಡೆ 65 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿನು ವೆಂಕಟೇಶ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ.

ಅಂಬರೀಶ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಅರುಳ್ ವಿನ್ಸೆಂಟ್ ಅವರ ಛಾಯಾಗ್ರಹಣವಿದೆ. ಚಿತ್ರ ಮುಂದಿನ ವರ್ಷ ತೆರೆಗೆ ಬರಲಿದೆ.
____

Be the first to comment

Leave a Reply

Your email address will not be published. Required fields are marked *

Translate »
error: Content is protected !!