ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಬಯಸಿದ್ದ ಅಭಿಮಾನಿಗಳಿಗೆ ಈ ಬಾರಿ ನಿರಾಸೆ ಆಗಿದೆ.
ಈ ಬಾರಿ ಫ್ಯಾನ್ಸ್ ಜೊತೆ ಬರ್ತ್ಡೇ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಯಶ್ ಹೇಳಿದ್ದಾರೆ. ಪತ್ರದ ಮೂಲಕ ಈ ವಿಚಾರವನ್ನು ಯಶ್ ತಿಳಿಸಿದ್ದಾರೆ.
ಜನವರಿ 8ರಂದು ಯಶ್ ಬರ್ತಡೇ. ಇದಕ್ಕಾಗಿ ಫ್ಯಾನ್ಸ್ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ನಡುವೆ ಯಶ್ ಬರೆದ ಪತ್ರದಿಂದ ಅಭಿಮಾನಿಗಳಿಗೆ ಬೇಸರ ಆಗಿದೆ. ಹುಟ್ಟುಹಬ್ಬವನ್ನು ಫ್ಯಾನ್ಸ್ಜೊತೆ ಆಚರಿಸಿಕೊಳ್ಳದೇ ಇರುವುದಕ್ಕೆ ಕಾರಣ ಏನು ಎಂಬುದನ್ನು ಯಶ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.
‘ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ. ನಿಮ್ಮ ಕಲ್ಮಶವಿಲ್ಲದ ಪ್ರೀತಿ, ಸಾಟಿಯೇ ಇಲ್ಲದ ಅಭಿಮಾನ ನನ್ನ ಹೃದಯ ತುಂಬುವಂತೆ ಮಾಡಿದೆ. ನನಗೆ ಗೊತ್ತು ನೀವೆಲ್ಲಾ ಕಾಯುತ್ತಿದ್ದೀರ. ಹುಟ್ಟಿದ ದಿನ ತುಂಬಾ ವಿಶೇಷ ಅಂತ ನನಗೆ ಅನ್ನಿಸೋಕೆ ಶುರುವಾಗಿದ್ದೇ ಇತ್ತೀಚಿನ ವರ್ಷಗಳಲ್ಲಿ. ನೀವು ನನ್ನ ದಿನವನ್ನ ನಿಮ್ಮ ದಿನವನ್ನಾಗಿಸಿಕೊಂಡು ಆಚರಿಸಿ ವಿಜೃಂಭಿಸೋಕೆ ಶುರು ಮಾಡಿದ್ದರಿಂದ’ ಎಂದು ಯಶ್ ಪತ್ರದಲ್ಲಿ ತಿಳಿಸಿದ್ದಾರೆ.
‘ನಾನು ಕೂಡ ಈ ವರ್ಷದ ಹುಟ್ಟುಹಬ್ಬದಂದು ನಿಮ್ಮನ್ನ ನೋಡಬೇಕು, ನಿಮ್ಮೊಂದಿಗೆ ಸಮಯ ಕಳೆಯಬೇಕು ಅಂದುಕೊಂಡಿದ್ದೆ. ಆದರೆ ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ. ನಿಮಗಾಗಿ ವಿಭಿನ್ನವಾಗಿರೋದೆನನ್ನೋ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ. ಅಲ್ಲಿಯವರೆಗೂ ನಿಮ್ಮ ತಾಳ್ಮೆ ಮತ್ತು ಪ್ರೀತಿಯೇ ನನಗೆ ಈ ವರ್ಷದ ಹುಟ್ಟುಹಬ್ಬದ ಉಡುಗೊರೆ’ ಎಂದು ಬರೆದಿದ್ದಾರೆ.
‘ಕ್ಷಮಿಸಿ.. ಈ ವರ್ಷದ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ. ಆದರೆ ಆದಷ್ಟು ಬೇಗ ನಿಮಗೆ ಸಿಗುತ್ತೇನೆ ಮತ್ತು ನಿಮ್ಮ ಕಾಯುವಿಕೆಯನ್ನು ಅರ್ಥಪೂರ್ಣವಾಗಿಸುತ್ತೇನೆ. ನಿಮ್ಮ ಪ್ರೀತಿಯ ಯಶ್’ ಎಂದು ಯಶ್ ಪತ್ರದಲ್ಲಿ ಹೇಳಿದ್ದಾರೆ.
____






Be the first to comment