ರೋರಿಂಗ್ ಸ್ಟಾರ್ ಶ್ರೀಮುರಳಿ ಬಘೀರ ಸಿನಿಮಾ ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ.
ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಬಘೀರ ಚಿತ್ರದ ಶೂಟಿಂಗ್ ವೇಳೆ ಅವಘಡ ಸಂಭವಿಸಿದೆ. ಬೆಂಗಳೂರಿನ ರಾಕ್ಲೈನ್ ಸ್ಟೂಡಿಯೋದಲ್ಲಿ ಬಘೀರ ಸಿನಿಮಾದ ಫೈಟಿಂಗ್ ಸೀಕ್ವೆನ್ಸ್ ಚಿತ್ರೀಕರಿಸಲಾಗುತ್ತಿತ್ತು. ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಶ್ರೀಮುರಳಿ ಅವರ ಮೊಣಕಾಲಿಗೆ ಪೆಟ್ಟಾಗಿದೆ ಎಂದು ತಿಳಿದುಬಂದಿದೆ. ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.
ಶ್ರೀಮುರಳಿ ಎರಡು ದಿನಗಳ ನಂತರ ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಚಿತ್ರತಂಡದಿಂದ ಹೆಚ್ಚಿನ ಮಾಹಿತಿ ದೊರೆಯಬೇಕಿದೆ.
ಬಘೀರಾ ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಚಿತ್ರವಾಗಿದೆ. ಬಘೀರ ಚಿತ್ರಕ್ಕೆ ಪ್ರಶಾಂತ್ ನೀಲ್ ಕಥೆ ಬರೆದಿದ್ದು, ಡಾ. ಸೂರಿ ನಿರ್ದೇಶನವಿದೆ.
ಬಘೀರ ಸಿನಿಮಾ ಪೋಸ್ಟರ್ಗಳ ಮೂಲಕ ಕುತೂಹಲ ಮೂಡಿಸಿದೆ. ಶ್ರೀಮುರಳಿ ಮಾಸ್ ಲುಕ್ ಗಮನ ಸೆಳೆದಿದೆ.
___





Be the first to comment