ಪವನ್ ಕುಮಾರ್ ನಿರ್ದೇಶನದ ಮಲಯಾಳಂ ‘ಧೂಮಂ’ ಸಿನಿಮಾದ ಚಿತ್ರೀಕರಣ ಮುಕ್ತಾಯ ಆಗಿದೆ.
ಶೂ ಟಿಂಗ್ ಕೇವಲ ಎರಡು ತಿಂಗಳಲ್ಲಿ ಮುಗಿಸಿದೆ. ʻಧೂಮಂʼ ಮಲಯಾಳಂ, ಕನ್ನಡ, ತಮಿಳು, ತೆಲುಗು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಕುರಿತು ಫೋಟೊವನ್ನು ಹಂಚಿಕೊಂಡಿರುವ ಹೊಂಬಾಳೆ ಫಿಲ್ಮ್ಸ್ ತಮ್ಮ ಬ್ಯಾನರ್ನಲ್ಲಿ ಮತ್ತೊಂದು ಸಿನಿಮಾ ರಿಲೀಸ್ಗೆ ರೆಡಿಯಾಗುತ್ತಿದೆ ಎಂದು ಘೋಷಿಸಿದೆ.
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ನಲ್ಲಿ ಮೂಡಿ ಬಂದಿರುವ ಮೊದಲ ಮಲಯಾಳಂ ಸಿನಿಮಾ ಇದಾಗಿದೆ. ಕನ್ನಡದ ನಿರ್ದೇಶಕರೇ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು ವಿಶೇಷ ಆಗಿದೆ.
ಪ್ರಧಾನ ಪಾತ್ರದಲ್ಲಿ ಫಹಾದ್ ಫಾಸಿಲ್ ನಟಿಸಿದ್ದಾರೆ. ನಾಯಕಿಯಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಅಪರ್ಣಾ ಬಾಲಮುರಳಿ ಜತೆಯಾಗಿದ್ದಾರೆ. ಸೆಪ್ಟೆಂಬರ್ 30ರಂದು ಘೋಷಣೆಯಾಗಿದ್ದ ಈ ಸಿನಿಮಾಕ್ಕೆ ಅಕ್ಟೋಬರ್ 9ರಂದು ಮುಹೂರ್ತ ನಡೆದಿತ್ತು.
ಇದೇ ಬ್ಯಾನರ್ ನ ಸಂತೋಷ್ ಆನಂದ್ ರಾಮ್ ನಿರ್ದೇಶನದ, ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಗೆ ಸಿದ್ಧವಾಗಿದೆ.
__
Be the first to comment