Nirup ಶಾನ್ವಿ ಶ್ರೀವಾಸ್ತವಗೆ ಜೋಡಿಯಾಗಿ ನಿರೂಪ್ ಭಂಡಾರಿ

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ನಿರೂಪ್ ಭಂಡಾರಿ ನಾಯಕ ಆಗಿ ಆಯ್ಕೆ ಆಗಿದ್ದಾರೆ.

ವಿಕ್ರಾಂತ್ ರೋಣ ಸಿನಿಮಾದಲ್ಲಿ ನಟಿಸಿದ್ದ ರಂಗಿತರಂಗ ನಟ ನಿರೂಪ್ ಈ ಹಿಂದೆ ಮಾಡದ ರೀತಿಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ನಿರ್ದೇಶಕರು ಮುಂದಿನ ದಿನಗಳಲ್ಲಿ ಅಧಿಕೃತ ಘೋಷಣೆ ಮಾಡುವ ನಿರೀಕ್ಷೆಯಿದೆ.

ಸಿನಿಮಾ ಶೂಟಿಂಗ್ ಫೆಬ್ರವರಿಯಲ್ಲಿ ಆರಂಭ ಆಗಲಿದೆ. ಶಾನ್ವಿ ಶ್ರೀವಾಸ್ತವ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ನಿರ್ದೇಶಕರು ಶೀಘ್ರವೇ ತಂತ್ರಜ್ಞರನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ. ಅಮೆರಿಕಾ ಅಮೆರಿಕಾ ಸಿನಿಮಾ ಸಂಗೀತ ನಿರ್ದೇಶಕ ಮನೋಮೂರ್ತಿ ಈ ಸಿನಿಮಾಕ್ಕಾಗಿ ಮತ್ತೆ ನಾಗತಿಹಳ್ಳಿ ಜೊತೆ ಒಂದಾಗಿದ್ದಾರೆ. ಚಿತ್ರಕ್ಕೆ ಎಸ್ ಕೆ ರಾವ್ ಛಾಯಾಗ್ರಹಣವಿದೆ.

ಸ್ಯಾಂಡಲ್ ವುಡ್ ಮೇ ಸ್ಟ್ರು ಎಂದೇ ಖ್ಯಾತಿ ಪಡೆದಿರುವ ನಾಗತಿಹಳ್ಳಿ ಚಂದ್ರಶೇಖರ್ ತಮ್ಮ ಮುಂದಿನ ಸಿನಿಮಾಗಾಗಿ ಸಿದ್ಧತೆ ನಡೆಸುತ್ತಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!