RRR ಆಸ್ಕರ್ ರೇಸ್ ನಲ್ಲಿ ನಾಟು-ನಾಟು ಹಾಡು

95 ನೇ ಅಕಾಡೆಮಿ ಪ್ರಶಸ್ತಿಗಳಿಗೆ ಅಂತಿಮ ನಾಮನಿರ್ದೇಶನಗಳನ್ನು ಪ್ರಕಟಿಸಲಾಗಿದ್ದು, ಭಾರತದ RRR ಚಿತ್ರದ ನಾಟು-ನಾಟು ಹಾಡು ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದೆ.

ಈ ಹಾಡನ್ನು ಎಂಎಂ ಕೀರವಾಣಿ ಸಂಯೋಜಿಸಿದ್ದಾರೆ. ಇತ್ತೀಚೆಗೆ, ನಾಟು-ನಾಟು ಹಾಡು ಗೋಲ್ಡನ್ ಗ್ಲೋಬ್ ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.

ಆರ್ ಆರ್ ಆರ್ ಸಿನಿಮಾದ ನಾಟು ನಾಟು…ಹಾಡು ಇತರ 4 ನಾಮನಿರ್ದೇಶಿತ ಹಾಡುಗಳ ಜೊತೆ ಸ್ಪರ್ಧಿಸುತ್ತಿದೆ. ಟೆಲ್ ಇಟ್ ಲೈಕ್ ಎ ವುಮನ್ ಸಿನಿಮಾ ಹಾಡು, ಲೇಡಿ ಗಾಗಾ ಅವರ ಹೋಲ್ಡ್ ಮೈ ಹ್ಯಾಂಡ್, ರಿಹಾನಾ ಅವರ ಲಿಫ್ಟ್ ಮಿ ಅಪ್ ಮತ್ತು ದಿಸ್ ಈಸ್ ಎ ಲೈಫ್ ಹಾಡುಗಳ ಜೊತೆ ಸ್ಪರ್ಧೆ ನಡೆದಿದೆ.

95 ನೇ ಅಕಾಡೆಮಿ ಪ್ರಶಸ್ತಿ ಸಮಾರಂಭ ಮಾರ್ಚ್ 12ರಂದು ಲಾಸ್ ಏಂಜಲೀಸ್‌ನಲ್ಲಿ ನಡೆಯಲಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!