ನಟ ಕಿರಿಕ್ ಕೀರ್ತಿ ಜಗತ್ತನ್ನೇ ಬಿಟ್ಟು ಹೋಗುವ ನಿರ್ಧಾರ ಮಾಡಿಬಿಟ್ಟಿದೆ ಎಂಬ ಆಘಾತಕಾರಿ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ.
ಕೀರ್ತಿ ಸೋಶಿಯಲ್ ಮೀಡಿಯಾದಲ್ಲಿ ನೋವಿನ ಘಟನೆಯನ್ನು ಶೇರ್ ಮಾಡಿದ್ದಾರೆ. ವೈಯಕ್ತಿಕ ಜೀವನದಲ್ಲಾದ ಕೆಲವು ಘಟನೆಗಳಿಂದ ಡಿಪ್ರೆಷನ್‌ಗೆ ಹೋಗಿದ್ದೆ. ಜಿಹಾದಿಗಳ ಬೆದರಿಕೆ ಕರೆಗಳು ಕುಟುಂಬವನ್ನು ತುಂಬಾ ಡಿಸ್ಟರ್ಬ್ ಮಾಡಿತ್ತು ಎಂದು ಸಾಮಾಜಿಕ ಜಾಲತಾದಲ್ಲಿ ಕಿರಿಕ್ ಕೀರ್ತಿ ಪೋಸ್ಟ್ ಹಂಚಿಕೊಂಡಿದ್ದಾರೆ.
ನಿರ್ಧಾರ ಮಾಡಿಬಿಟ್ಟಿದ್ದೆ. ಜಗತ್ತಿಗೆ ವಿದಾಯ ಹೇಳಿಬಿಡಬೇಕು ಅಂತ. ಕಾರಣಗಳು ಹಲವು. ವೈಯಕ್ತಿಕ ಜೀವನದಲ್ಲಾದ ಕೆಲವು ಘಟನೆಗಳು ನನ್ನನ್ನು ಇನ್ನಿಲ್ಲದಂತೆ ಕುಗ್ಗಿಸಿತ್ತು. ಜೀವನದ ಮೇಲೊಂದು ಕೆಟ್ಟ ನಿರಾಸಕ್ತಿ ಬಂದಿತ್ತು. ಎಲ್ಲ ಪ್ರಯತ್ನಗಳೂ ಕೈಕೊಡ್ತಿತ್ತು. ಒಂದು ಕಡೆ ಜಿಹಾದಿಗಳ ಬೆದರಿಕೆ ಕರೆಗಳು ಕುಟುಂಬವನ್ನು ಡಿಸ್ಟರ್ಬ್ ಮಾಡಿತ್ತು. ಸೋಷಿಯಲ್ ಮೀಡಿಯಾದಿಂದಲೂ ಸ್ವಲ್ಪ ದೂರವೇ ಇದ್ದೆ. ಆದ್ರೆ ಈಗ ಎಲ್ಲದಕ್ಕೂ ಹೆದರಿ ಹೋಗಿಬಿಟ್ರೆ ನನ್ನನ್ನು ಈ ಪರಿಸ್ಥಿತಿಗೆ ತಂದವರಿಗೆ ಉತ್ತರ ಕೊಡೋದು ಹೇಗೆ..? ನನ್ನ ನಂಬಿ ಇನ್ವೆಸ್ಟ್ ಮಾಡಿರೋರಿಗೆ ನ್ಯಾಯ ಸಿಗೋದು ಹೇಗೆ…? ನನ್ನ ಮಗನ ಭವಿಷ್ಯ ಕಟ್ಟೋದು ಹೇಗೆ..? ಈ ಪ್ರಶ್ನೆಗಳು ಕಾಡಿದ್ವು, ಟೈಪ್ ಮಾಡಿದ ಡೆತ್ ನೋಟ್ ಡಿಲೀಟ್ ಮಾಡ್ದೆ’ ಎಂದು ಬರೆದಿದ್ದಾರೆ.
’10 ನಿಮಿಷ ಧ್ಯಾನ ಮಾಡ್ದೆ. ತಡವಾದ್ರೂ ಪರವಾಗಿಲ್ಲ ನನ್ನ ನಂಬಿದ ಎಲ್ಲರಿಗೂ ಅವರಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳೋ ಹಾಗೆ ಸಾಧಿಸಬೇಕು ಅಂತ ಡಿಸೈಡ್ ಮಾಡ್ದೆ. ಮನಸ್ಸಲ್ಲಿದ್ದ ಕೆಟ್ಟ ಅಲೋಚನೆಗಳನ್ನು ಕಿತ್ತು ಬಿಸಾಕಿದ್ದೇನೆ. ಕೆಲವರನ್ನು ಕಳೆದುಕೊಂಡಿದ್ದರ ಹೊರತು ಬೇರೆ ಎಲ್ಲವನ್ನೂ ಟ್ರ್ಯಾಕಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡ್ತೀನಿ. ನಿಮ್ಮ ಬೆಂಬಲ ಜೊತೆಗಿರಲಿ. ಡಿಪ್ರೆಷನ್‌ನಿಂದ ಮತ್ತೆ ವಾಪಾಸ್ ಬರಲು ಸಹಕರಿಸಿ. ಮತ್ತೆ ನನ್ನ ಮುಖದ ಮೇಲಿನ ನಗು ವಾಪಾಸ್ ತರುವ ತನಕ ಪ್ರಯತ್ನ ನಿರಂತರ. ಇದು ಹೇಳಿಕೊಳ್ಳಬಾರದ ವಿಷಯ. ಆದ್ರೆ ಹೇಳಿಕೊಂಡರಷ್ಟೆ ಸಮಾಧಾನ’ ಎಂದು ಕಿರಿಕ್ ಕೀರ್ತಿ ಹೇಳಿದ್ದಾರೆ.
ಕಿರಿಕ್ ಕೀರ್ತಿ ಬಗ್ಗೆ ನೆಟ್ಟಿಗರು ಸಹಾನುಭೂತಿ ವ್ಯಕ್ತಪಡಿಸುತ್ತಿದ್ದಾರೆ.
___





Be the first to comment