ಫೆಬ್ರವರಿ 10ರಂದು ಹೊಂದಿಸಿ ಬರೆಯಿರಿ ಸಿನಿಮಾ ರಿಲೀಸ್‌ಗೆ ಆಗಲಿದೆ.
ರಾಮೇನಹಳ್ಳಿ ಜಗನ್ನಾಥ್ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸಿನಿಮಾ ಇದಾಗಿದೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ಟ್ರೈಲರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಮಾತನಾಡಿ, ‘ಹೊಂದಿಸಿ ಬರೆಯಿರಿ’ ಎಂದಾಗ ನೆನಪಾಗೋದು ಬಾಲ್ಯ. ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಹೋಗಬೇಕು. ಬದುಕು ಬಂದಂತೆ ಸ್ವೀಕರಿಸಿ ಅನ್ನೋದು ಈ ಚಿತ್ರದ ಆಶಯ. ಐದು ಜನ ಸ್ನೇಹಿತರ ಹನ್ನೆರಡು ವರ್ಷದ ಜರ್ನಿ ಈ ಚಿತ್ರದಲ್ಲಿದೆ. ಕಾಲೇಜು, ಕಾಲೇಜು ನಂತರದ ದಿನಗಳು, ಮದುವೆ ಈ ಜರ್ನಿಯನ್ನು ಒಳಗೊಂಡಿದೆ. ತುಂಬಾ ಜನಕ್ಕೆ ಈ ಸಿನಿಮಾ ಕನೆಕ್ಟ್ ಆಗುತ್ತೆ. ಈ ಚಿತ್ರದ ಟೈಟಲ್ ನೀಡಿದ್ದು ಮಾಸ್ತಿ ಸರ್. ನನಗೆ ಈ ಚಿತ್ರ ಹೊಸತು. ಇಲ್ಲಿ ನಟಸಿರೋರೆಲ್ಲ ಅನುಭವಿಗಳು ಆದ್ರಿಂದ ಸಾಕಷ್ಟು ತಯಾರಿ ಮಾಡಿಕೊಂಡು ಈ ಸಿನಿಮಾ ಕೆಲಸ ಆರಂಭಿಸಿದೆವು ಎಂದರು.
ನಟ ಪ್ರವೀಣ್ ತೇಜ್ ಮಾತನಾಡಿ, ನಮ್ಮ ಚಿತ್ರದ ನಿಜವಾದ ನಾಯಕ ನಿರ್ದೇಶಕ ಹಾಗೂ ನಿರ್ಮಾಪಕ ರಾಮೇನಹಳ್ಳಿ ಜಗನ್ನಾಥ್. ಒಂದೊಳ್ಳೆ ತಂಡವನ್ನು ಕಟ್ಟಿಕೊಂಡು ಎಲ್ಲರನ್ನೂ ನಿಭಾಯಿಸಿ ತುಂಬಾ ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ಒಂದೊಳ್ಳೆ ಅನುಭವವನ್ನು ಈ ಸಿನಿಮಾ ನೀಡಿದೆ ಎಂದು ತಿಳಿಸಿದರು.
ನಟಿ ಭಾವನ ರಾವ್ ಮಾತನಾಡಿ, ‘ಹೊಂದಿಸಿ ಬರೆಯಿರಿ ಕಥೆ ಕೇಳಿದಾಗ ಸಿಂಪಲ್ ಕಥೆ ಬಟ್ ಇದರಲ್ಲಿ ಬರುವ ಪಾತ್ರಗಳು ತುಂಬಾ ಕಾಂಪ್ಲಿಕೇಟ್ ಅನಿಸ್ತು. ನಮ್ಮ ಜೀವನದ ಹಾಗೆ ಕೆಲವು ಸನ್ನಿವೇಶಗಳಿಂದ ನಾವು ಜೀವನವನ್ನು ಕಾಂಪ್ಲಿಕೇಟ್ ಮಾಡಿಕೊಳ್ಳುತ್ತೇವೆ. ಚಿತ್ರದಲ್ಲಿ ನಾನು ಭೂಮಿಕ ಪಾತ್ರ ನಿರ್ವಹಿಸಿದ್ದೇನೆ ಎಂದು ಹೇಳಿದರು.
ಪ್ರವೀಣ್ ತೇಜ್, ಭಾವನಾ ರಾವ್, ಸಂಯುಕ್ತ ಹೊರನಾಡು, ಐಶಾನಿ ಶೆಟ್ಟಿ, ನವೀನ್ ಶಂಕರ್, ಶ್ರೀ ಮಹದೇವ್, ಅರ್ಚನಾ ಜೋಯಿಸ್, ಅನಿರುದ್ಧ್ ಆಚಾರ್ಯ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.
ಶಾಂತಿ ಸಾಗರ್ ಹೆಚ್.ಜಿ ಕ್ಯಾಮೆರಾ, ಜೋ ಕೋಸ್ಟ ಸಂಗೀತ, ಕೆ. ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಸಾಹಿತ್ಯ ಚಿತ್ರಕ್ಕಿದೆ. ಮಾಸ್ತಿ, ಪ್ರಶಾಂತ್ ರಾಜಪ್ಪ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಸಂಭಾಷಣೆ ಬರೆದಿದ್ದಾರೆ. ‘ಸಂಡೇ ಸಿನಿಮಾಸ್’ ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಸ್ನೇಹಿತರು ಸೇರಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
__
Be the first to comment