ಕಾಂತಾರ ಸಿನೆಮಾದ ಮುಂದಿನ ಭಾಗದ ಕಥೆ ಏನು ಎನ್ನುವ ಕುತೂಹಲಕ್ಕೆ ನಿರ್ದೇಶಕ ರಿಷಬ್ ಶೆಟ್ಟಿ ಉತ್ತರಿಸಿದ್ದಾರೆ.
” ಕಾಂತಾರ ಭಾಗ -2 ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದಾರೆ. ನೀವೆಲ್ಲ ನೋಡಿದ್ದು ‘ಕಾಂತಾರ’ ಭಾಗ 2. ‘ಕಾಂತಾರ’ ಭಾಗ -1 ಬರಬೇಕಾಗಿದೆ. ಅದನ್ನು ಶೀಘ್ರದಲ್ಲೇ ನಿರೀಕ್ಷಿಸಿ” ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.
ರವಿವಾರ ಆಯೋಜಿಸಿದ್ದ ಚಿತ್ರದ ಶತದಿನೋತ್ಸವ ಸಮಾರಂಭದಲ್ಲಿ ಮಾತನಾಡಿದ ರಿಷಬ್ ಶೆಟ್ಟಿ, ಕಾಂತಾರದ ಗೆಲುವು ಖುಷಿ ಕೊಟ್ಟಿದೆ. ಯಶಸ್ಸಿಗೆ ಕಾರಣರಾದ ಚಿತ್ರತಂಡ, ಸಮಸ್ತ ಜನತೆಗೂ ನನ್ನ ಧನ್ಯವಾದ ಎಂದರು.
ನೆಟ್‌ಫ್ಲಿಕ್ಸ್‌ನಲ್ಲೂ ‘ಕಾಂತಾರ’ ಸಿನಿಮಾ ಇಂಗ್ಲಿಷ್‌ಗೆ ಡಬ್ ಮಾಡಿ ಬಿಡುಗಡೆ ಮಾಡಲು ಪ್ರಯತ್ನ ನಡೆಯುತ್ತಿದೆ’ ಎಂದು ರಿಷಬ್ ಶೆಟ್ಟಿ ಹೇಳಿದರು.
ರಿಷಬ್ ಶೆಟ್ಟಿ ನಿರ್ದೇಶಿಸಿ, ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡ ‘ಕಾಂತಾರ’ ಚಿತ್ರವು ಒಟಿಟಿಯಲ್ಲಿ ಬಿಡುಗಡೆ ಆಗಿದ್ದರೂ, ಚಿತ್ರಮಂದಿರಗಳಲ್ಲಿ ಪ್ರದರ್ಶನ ಮುಂದುವರಿಸಿದೆ.
ಚಿತ್ರದ ಶತದಿನೋತ್ಸವ ಸಮಾರಂಭವನ್ನು ರವಿವಾರ ಬೆಂಗಳೂರಿನ ಬಂಟರ ಸಂಘದಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ಅದ್ದೂರಿಯಾಗಿ ಆಯೋಜಿಸಿದ್ದರು.
ಮಾಹಿತಿಯಂತೆ ರಿಷಬ್ ಸದ್ಯ ಪ್ರೀಕ್ವೆಲ್‌ನ ಸ್ಕ್ರಿಪ್ಟ್ ಕಾರ್ಯಗಳನ್ನು ಆರಂಭಿಸಿದ್ದು, ಜೂನ್ ವೇಳೆಗೆ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ. 2024ರ ಮಧ್ಯಭಾಗದಲ್ಲಿ ಸಿನಿಮಾ ಬಿಡುಗಡೆಗೆ ಹೊಂಬಾಳೆ ಫಿಲ್ಮ್ಸ್ ಯೋಜನೆ ರೂಪಿಸಿದೆ.
___

Be the first to comment