Disha Ramesh: ಫೆ. 17ರಂದು ಸಿರಿ ಲಂಬೋದರ ವಿವಾಹ ತೆರೆಗೆ

ಮಂಡ್ಯ ರಮೇಶ್‌ ಮಗಳು ದಿಶಾ ರಮೇಶ್‌ ನಾಯಕಿಯಾಗಿ ನಟಿಸಿರುವ ಸಿರಿ ಲಂಬೋದರ ವಿವಾಹ ಚಿತ್ರ ಫೆ. 17ರಂದು ಬಿಡುಗಡೆಯಾಗಲಿದೆ.

ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಸೌರಭ್‌ ಕುಲಕರ್ಣಿ, ಎರಡು ತಿಂಗಳ ಹಿಂದೆ ರಮೇಶ್ ಅರವಿಂದ್ ಅವರು ಟೀಸರ್ ಬಿಡುಗಡೆ ಮಾಡಿದ್ದರು. ಆನಂತರ ನಮ್ಮ ಚಿತ್ರದ ಪ್ರೀಮಿಯರ್ ಹೊರದೇಶಗಳಲ್ಲಿ ನಡೆಯಿತು. ಅಲ್ಲಿನ ಜನ ನಮ್ಮ ಚಿತ್ರವನ್ನು ಮನಸಾರೆ ಮೆಚ್ಚಿಕೊಂಡರು ಎಂದರು.

ಈಗ ಟ್ರೇಲರ್ ಬಿಡುಗಡೆಯಾಗಿದೆ. ಸಿಹಿಕಹಿ ಚಂದ್ರು, ಶಾಲಿನಿ, ಬೇಬಿ ವಂಶಿಕಾ ಸೇರಿದಂತೆ ಅನೇಕ ಗಣ್ಯರು ನಮ್ಮ ಚಿತ್ರಕ್ಕೆ ಪ್ರೋತ್ಸಾಹ ನೀಡಿದ್ದಾರೆ. ಫೆಬ್ರವರಿ 17ರಂದು ಚಿತ್ರ ತೆರೆಗೆ ಬರಲಿದೆ. ನೋಡಿ ಹಾರೈಸಿ ಎಂದು ಕೋರಿದರು.

ಇತ್ತೀಚಿಗೆ ಹೊಸಬರ ಚಿತ್ರ ಚೆನ್ನಾಗಿದ್ದರೂ ಜನ ಥಿಯೇಟರ್ ಹತ್ತಿರ ಬರುತ್ತಿಲ್ಲ. ಕೆಲವು ಚಿತ್ರತಂಡದವರು ಲೈವ್ ಮೂಲಕ ಜನರನ್ನು ಥಿಯೇಟರ್ ಗೆ ಬನ್ನಿ ಎಂದು ಕಣ್ಣೀರು ಹಾಕುತ್ತಾ ಕರೆಯುತ್ತಿದ್ದುದ್ದನ್ನು ಕಂಡು ಬೇಸರವಾಯಿತು. ಅ ಪರಿಸ್ಥಿತಿ ಈ ಚಿತ್ರಕ್ಕೆ ಬಾರದಿರಲಿ ಎಂದು ನಟ ರಾಜೇಶ್ ನಟರಂಗ ಹೇಳಿದರು.

ನಾಯಕಿ ದಿಶಾ ರಮೇಶ್, ಇದು ಉತ್ತಮ ಕಂಟೆಂಟ್ ವುಳ್ಳ ಚಿತ್ರ ಆಗಿದ್ದು ಎಲ್ಲರೂ ನೋಡಿ ಎಂದರು.

ಚಿತ್ರದಲ್ಲಿ ಅಂಜನ್‌ ಎ. ಭಾರಧ್ವಾಜ್‌ ನಾಯಕರಾಗಿದ್ದು, ಇವರಿಗೆ ಮೈಸೂರಿನ ದಿಶಾ ರಮೇಶ್‌ ಜೊತೆಯಾಗಿದ್ದಾರೆ.

ಸಂಗೀತ ನಿರ್ದೇಶಕ ಸಂಘರ್ಷ್ ಕುಮಾರ್, ನಿರ್ಮಾಪಕಿ ನಮ್ರತಾ ಚಿತ್ರದ ಕುರಿತು ಮಾತನಾಡಿದರು.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!