Kabzaa ಫೆ. 26ಕ್ಕೆ ʼಕಬ್ಜ’ ಆಡಿಯೊ ಲಾಂಚ್‌ ಈವೆಂಟ್‌

ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಪ್ಯಾನ್‌ ಇಂಡಿಯಾ ಸಿನಿಮಾವಾದ ʼಕಬ್ಜ’ ಚಿತ್ರದ ಆಡಿಯೊ ಲಾಂಚ್‌ ಈವೆಂಟ್‌ ಶಿಡ್ಲಘಟ್ಟದಲ್ಲಿ ಫೆ. 26ಕ್ಕೆ ಅದ್ದೂರಿಯಾಗಿ ನಡೆಯಲಿದೆ.

ಫೆಬ್ರವರಿ 26ಕ್ಕೆ ಶಿಡ್ಲಘಟ್ಟದ ಜೂನಿಯರ್ ಕಾಲೇಜು ಮೈದಾನದ ಅದ್ಧೂರಿ ವೇದಿಕೆಯಲ್ಲಿ ‘ಕಬ್ಜ’ ಆಡಿಯೋ ಲಾಂಚ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 3 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ ಎಂದು ಆರ್‌. ಚಂದ್ರು ಮಾಹಿತಿ ನೀಡಿದ್ದಾರೆ.

ಪಾಸ್ ಇದ್ದವರಿಗೆ ಮಾತ್ರ ಅವಕಾಶವಿದ್ದು. ಶಿಡ್ಲಘಟ್ಟ ಸರಸ್ವತಿ ಕಾನ್ವೆಂಟ್ ಹಾಗೂ ವಿಜಯಪುರದ ಸುವೀಕ್ಷ ಹಾಸ್ಪಿಟಲ್‌ನಲ್ಲಿ ಪಾಸ್‌ಗಳು ದೊರೆಯಲಿದೆ. ಸಂಜೆ 6 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ.

ಆಡಿಯೋ ಲಾಂಚ್‌ ಕಾರ್ಯಕ್ರಮದಲ್ಲಿ ಉಪೇಂದ್ರ, ಕಿಚ್ಚ ಸುದೀಪ್, ನಟಿ ಶ್ರಿಯಾ ಸರನ್ ಸೇರಿದಂತೆ ಇಡೀ ಚಿತ್ರತಂಡ ಭಾಗಿ ಆಗಲಿದೆ. ನಟ ಶಿವರಾಜ್‌ಕುಮಾರ್ ಸೇರಿದಂತೆ ಖ್ಯಾತ ಕಲಾವಿದರು ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆ ಇದೆ.

ಮಾ.17ರಂದು ಕಬ್ಜ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಸಿನಿಮಾವನ್ನು ಅಪ್ಪುಗೆ ಅರ್ಪಿಸುವುದಕ್ಕೆ ಚಿತ್ರತಂಡ ನಿರ್ಧರಿಸಿದೆ. ಕಬ್ಜ ಸಿನಿಮಾದಲ್ಲಿ ಉಪೇಂದ್ರ ಅವರ ಜತೆಯಲ್ಲಿ ಕಿಚ್ಚ ಸುದೀಪ್‌ ಬಣ್ಣ ಹಚ್ಚಿದ್ದಾರೆ.

ಸಿನಿಮಾದ ಟ್ರೇಲರ್‌ ಈಗಾಗಲೇ ಬಿಡುಗಡೆಯಾಗಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ಐಎಂಡಿಬಿ ಬಿಡುಗಡೆ ಮಾಡಿರುವ 2023ರ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಇರುವ ಕನ್ನಡದ ಏಕೈಕ ಸಿನಿಮಾ ಇದಾಗಿದೆ.

‘ಕಬ್ಜ’ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದೆ. ಉಪೇಂದ್ರಗೆ ನಾಯಕಿಯಾಗಿ ಶ್ರೀಯಾ ಶರಣ್ ಕಾಣಿಸಿಕೊಂಡಿದ್ದಾರೆ. ನವಾಬ್ ಷಾ, ಕಬೀರ್ ಸಿಂಗ್ ದುಹಾನ್, ಪ್ರಮೋದ್ ಶೆಟ್ಟಿ, ಮುರಳಿ ಶರ್ಮ ಮುಂತಾದ ಕಲಾವಿದರು ಚಿತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಚಿತ್ರಕ್ಕೆ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ಎಜೆ ಶೆಟ್ಟಿ ಛಾಯಾಗ್ರಹಣ, ಶಿವಕುಮಾರ್ ಕಲಾ ನಿರ್ದೇಶನ ಮಾಡಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!